ಬೆಂಗಳೂರು: ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಸಚಿವೆ ಶಶಿಕಲಾ ಜೊಲ್ಲೆ ಅವರು ರಾಜೀನಾಮೆ ನೀಡುವವರೆಗೂ ಸಚಿವರ ಮನೆಗೆ ನಿತ್ಯ ಮೊಟ್ಟೆ ನೀಡುವ ಹೋರಾಟವನ್ನು ಹಮ್ಮಿಕೊಂಡಿರುವುದಾಗಿ ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ ತಿಳಿಸಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ವೇಟ್ ಲಿಫ್ಟರ್ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದು ನಾವೆಲ್ಲರು ಹೆಮ್ಮೆ ಪಡುವಂತೆ ಮಾಡಿದ್ದಾರೆ. ಆದರೆ ರಾಜ್ಯದ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆಯಾದ ಶಶಿಕಲಾ ಜೊಲ್ಲೆ ಅವರು ಗರ್ಭಿಣಿಯರು ಹಾಗೂ ಮಕ್ಕಳ ಪೌಷ್ಟಿಕತೆ ಹೆಚ್ಚಿಸಲು ನೀಡಲಾಗುವ ಮೊಟ್ಟೆಯಲ್ಲಿ ಹಣ ಮಾಡಲು ಮುಂದಾಗಿ, ರಾಜ್ಯವೇ ತಲೆತಗ್ಗಿಸುವಂತೆ ಮಾಡಿರುವುದು ದುರಂತ ಎಂದರು.
ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕುಸುಮಾ ಹನುಮಂತರಾಯಪ್ಪ ಇದನ್ನೂ ಓದಿ:ಮಾತೃಪೂರ್ಣ ಯೊಜನೆಯಲ್ಲಿ ಹಣ ದುರ್ಬಳಕೆ ಆರೋಪ: ಸಚಿವೆ ಜೊಲ್ಲೆ ವಿರುದ್ಧ ರಾತ್ರೋರಾತ್ರಿ ಕಾಂಗ್ರೆಸ್ ಪ್ರತಿಭಟನೆ
ಮಾತೃಪೂರ್ಣ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬದಲು ಅಲ್ಪ ಪ್ರಮಾಣದ ಮಾತೃತ್ವವೇ ಇಲ್ಲದಂತೆ ನಮ್ಮ ಸಚಿವರು ನಡೆದುಕೊಂಡಿದ್ದಾರೆ. ಗರ್ಭಿಣಿಯರು, ಬಾಣಂತಿಯರು, ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರದಲ್ಲಿ ಭ್ರಷ್ಟಾಚಾರ ನಡೆಸುವ ಇವರಿಗೆ ಕಿಂಚಿತ್ತೂ ಕರುಣೆ ಇಲ್ಲವೇ?, ಅದೇ ಸಚಿವಾಲಯ ಸಮೀಕ್ಷೆ ಮಾಡಿ ರಾಜ್ಯದಲ್ಲಿ ನಾಲ್ಕೂವರೆ ಲಕ್ಷದಷ್ಟು ಮಕ್ಕಳು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲೇ ಒಂದೂವರೆ ಲಕ್ಷದಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ವರದಿ ಬಂದಿದೆ. ಈ ಸಂದರ್ಭದಲ್ಲಿ ಎಲ್ಲವನ್ನು ತಿಳಿದು ಟೆಂಡರ್ ನೀಡಲು ಕೋಟ್ಯಂತರ ರೂಪಾಯಿ ಹಣ ಪಡೆಯುವುದು ಸರಿಯೇ?, ಆ ರೀತಿ ಹಣ ಕೊಟ್ಟು ಟೆಂಡರ್ ಪಡೆದವರು ನಿಜಕ್ಕೂ ಮಕ್ಕಳಿಗೆ ಉತ್ತಮ ಗುಣ ಮಟ್ಟದ ಮೊಟ್ಟೆ ನೀಡುತ್ತಾರಾ?. ಈ ರೀತಿ ಮನುಷ್ಯತ್ವ ಇಲ್ಲದಂತೆ ವರ್ತಿಸಿ ಜನರಿಗೆ ಯಾವ ರೀತಿ ಮಾದರಿಯಾಗಲು ಹೊರಟಿದ್ದಾರೆ?. ಈ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅತ್ಯಾಚಾರ, ಅನಾಚಾರ, ಕೊಳ್ಳೆ ಹೊಡೆಯುವುದೇ ಆಗಿದೆ. ಜನಪರ ಕಾರ್ಯಕ್ರಮ ನೀಡುತ್ತಿಲ್ಲ ಎಂದು ಕುಸುಮಾ ಅವರು ಟೀಕಿಸಿದರು.
ಇದನ್ನೂ ಓದಿ:ಸಚಿವೆ ಶಶಿಕಲಾ ಜೊಲ್ಲೆ ರಾಜೀನಾಮೆಗೆ ಕಾಂಗ್ರೆಸ್ ನಾಯಕರ ಆಗ್ರಹ