ಬೆಂಗಳೂರು:ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ವಿ.ರಾಮಕೃಷ್ಣ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮತ್ತಿತರ ನಾಯಕರು ಸಂತಾಪ ಸೂಚಿಸಿದ್ದಾರೆ.
ಡಿಕೆಶಿ ತಮ್ಮ ಸಂತಾಪ ಸಂದೇಶದಲ್ಲಿ, 'ವಿ.ರಾಮಕೃಷ್ಣ ಅವರು ಹಿರಿಯ ನಾಯಕರು. ಪಕ್ಷಕ್ಕೆ ಅವರ ಸೇವೆ ಅಪಾರವಾಗಿದ್ದು, ವೀರಪ್ಪ ಮೊಯ್ಲಿ ಅವರ ಸರ್ಕಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅವರ ಅಗಲಿಕೆ ಸುದ್ದಿ ಕೇಳಿ ಬೇಸರವಾಗಿದೆ. ಆತ್ಮಕ್ಕೆ ಶಾಂತಿ ಸಿಗಲಿ. ಅವರ ನಿಧನದ ನೋವನ್ನು ಕುಟುಂಬ ಸದಸ್ಯರು ಹಾಗೂ ಅವರ ಅಭಿಮಾನಿಗಳಿಗೆ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ತಿಳಿಸಿದ್ದಾರೆ.