ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ರಾಜಭವನ ಮುತ್ತಿಗೆಗೆ ಯತ್ನಿಸಿದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು, ಠಾಣೆಗೆ ಕರೆದೊಯ್ದಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕನ್ನು ಪೊಲೀಸರು ವಶಕ್ಕೆ ಪಡೆದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ಕಾಂಗ್ರೆಸ್ ಭವನಕ್ಕೆ ಪಾದಯಾತ್ರೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕರನ್ನ ಇಂಡಿಯನ್ ಎಕ್ಸ್ಪ್ರೆಸ್ ವೃತ್ತದ ಬಳಿ ಪೊಲೀಸರು ತಡೆದು, ವಶಕ್ಕೆ ಪಡೆದರು. ಬಳಿಕ ಪೊಲೀಸ್ ಠಾಣೆಗೆ ಕರೆದೊಯ್ದರು.
ಕೇಂದ್ರ ಸರ್ಕಾರ ರಾಷ್ಟ್ರೀಯ ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡುತ್ತದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು ರಾಜಭವನ ಮುತ್ತಿಗೆಗೆ ಕರೆಕೊಟ್ಟಿದ್ದರು. ರಾಜ್ಯದಲ್ಲಿ ಅಷ್ಟೇ ಅಲ್ಲ ದೇಶಾದ್ಯಂತ ಕಾಂಗ್ರೆಸ್ ರಾಜಭವನ ಚಲೋ ಹಮ್ಮಿಕೊಂಡಿದೆ.
ಪ್ರತಿಭಟನಾ ಮೆರವಣಿಗೆಗೆ ತೆರಳುವ ಮುನ್ನವೇ ರಾಜ್ಯ ಕಾಂಗ್ರೆಸ್ ನಾಯಕರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದು, ಕಾರ್ಯಕರ್ತರು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದೀರಿ, ಸಂಯಮ ಹಾಗೂ ಸೌಜನ್ಯದಿಂದ ನಡೆದುಕೊಳ್ಳಿ. ಯಾವುದೇ ರೀತಿಯ ಅಹಿತಕರ ಘಟನೆಗೆ ಅವಕಾಶ ಮಾಡಿಕೊಡಬೇಡಿ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಮನವಿ ಮಾಡಿಕೊಂಡರು.
ಸಿದ್ದರಾಮಯ್ಯ, ಡಿಕೆಶಿ ಸೇರಿ ಕೈ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು ಸುಧಾಕರ್ ಹೇಳಿಕೆಗೆ ಡಿಕೆಶಿ ತಿರುಗೇಟು:ಪ್ರತಿಭಟನೆ ಆರಂಭಕ್ಕೆ ಮುನ್ನ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕಾಂಗ್ರೆಸ್ ಪ್ರತಿಭಟನೆಯಿಂದ ಕೋವಿಡ್ ಸಂಖ್ಯೆ ಹೆಚ್ಚಾಗುತ್ತದೆ ಎಂಬ ಸಚಿವ ಸುಧಾಕರ್ ಹೇಳಿಕೆಗೆ ತಿರುಗೇಟು ನೀಡಿದ್ದು, ಬಿಜೆಪಿಯ ಯಾರು ಯಾರು ಕೋವಿಡ್ ನಿಯಮ ಉಲಂಘನೆ ಮಾಡಿದ್ದಾರೆ ಮೊದಲು ಅವರ ಮೇಲೆ ಕೇಸ್ ಹಾಕಲಿ. ಕಾಂಗ್ರೆಸ್ನವರ ಮೇಲೆ ಮಾತ್ರ ಕೇಸ್ ಹಾಕ್ತಿದ್ದಾರೆ.
ಕೆ.ಎಸ್.ಈಶ್ವರ ಅವರ ಮೇಲೂ ಕೇಸ್ ಹಾಕಿ. ಬಿಜೆಪಿ ಅನೇಕ ಕಾರ್ಯಕ್ರಮಗಳನ್ನು ಮಾಡಿದೆ, ಆಗ ಯಾಕೆ ಕೇಸ್ ಹಾಕಿಲ್ಲ. ದೇಶದಲ್ಲಿ ಹೋರಾಟ ಮಾಡುವ ಹಕ್ಕನ್ನ ಸಂವಿಧಾನ ನಮಗೆ ನೀಡಿದೆ. ಇದೇ ಹೋರಾಟದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ರಾಹುಲ್ ಗಾಂಧಿ ಮೇಲೆ ಸುಳ್ಳು ಕೇಸ್ ಹಾಕ್ತಿದ್ದಾರೆ. ಬಿಜೆಪಿ ನಮ್ಮನ್ನು ಹೆದರಿಸುವ ಬೆದರಿಸುವ ಕೆಲಸ ಮಾಡಿ, ದ್ವೇಷದ ರಾಜಕಾರಣ ಮಾಡ್ತಿದೆ. ನ್ಯಾಷನಲ್ ಹೆರಾಲ್ಡ್ ಕಾಂಗ್ರೆಸ್ ಪಾರ್ಟಿಯ ಆಸ್ತಿ. ಯಂಗ್ ಇಂಡಿಯಾ ಕೂಡ ಕಾಂಗ್ರೆಸ್ ಆಸ್ತಿ ಎಂದರು.
ಕಾಂಗ್ರೆಸ್ ದೇವಾಲಯಕ್ಕೆ ಪ್ರವೇಶ ನೀಡದ ಇಂತಹ ನೀಚ ಸರ್ಕಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ. ಎಐಸಿಸಿ ಕಚೇರಿಯ ಪ್ರವೇಶಕ್ಕೆ ಅವಕಾಶ ನೀಡಲು ಕೇಂದ್ರ ಸರ್ಕಾರ ದಬ್ಬಾಳಿಕೆ ನಡೆಸಿದೆ. ನಾವು ನ್ಯಾಯಯುತ ಹೋರಾಟಕ್ಕೆ ಮುಂದಾಗಿದ್ದು, ನಮ್ಮ ರಾಷ್ಟ್ರೀಯ ನಾಯಕರ ವಿರುದ್ಧ ಕೇಂದ್ರ ಸರ್ಕಾರದ ಪಿತೂರಿಯನ್ನು ಜನರ ಮುಂದೆ ಕೊಂಡೊಯ್ಯುವ ಪ್ರಯತ್ನ ಮಾಡುತ್ತಿದ್ದೇವೆ. ಇಂದು ಯಾರೇ ತಡೆಗಟ್ಟಿದರು ರಾಜಭವನ ಮುತ್ತಿಗೆಯನ್ನು ನಿಲ್ಲಿಸುವುದಿಲ್ಲ ಎಂದರು.
(ಇದನ್ನೂ ಓದಿ:ರಾಹುಲ್ ವಿಚಾರಣೆ ವಿರೋಧಿಸಿ ರಾಜಭವನಕ್ಕೆ ಕಾಂಗ್ರೆಸ್ ಮುತ್ತಿಗೆ: ಕೇಂದ್ರದ ವಿರುದ್ಧ ಆಕ್ರೋಶ)