ಬೆಂಗಳೂರು : ನಾಳೆ ಬೆಳಗ್ಗೆ 10 ಗಂಟೆಗೆ ರಾಜ ಭವನಕ್ಕೆ ಕಾಂಗ್ರೆಸ್ ನಿಯೋಗ ಭೇಟಿ ನೀಡಲಿದೆ. ಈಶ್ವರಪ್ಪರನ್ನ ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಲಿದೆ. 40% ಕಮಿಷನ್ಗಾಗಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾಗಿರುವ ಆರೋಪ ಎದುರಿಸುತ್ತಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಕಾಂಗ್ರೆಸ್ ನಾಯಕರು ಮನವಿ ಸಲ್ಲಿಸಲಿದ್ದಾರೆ.
ಅವರ ವಿರುದ್ಧ ಭ್ರಷ್ಟಾಚಾರ ಹಾಗೂ ಕೊಲೆ ಪ್ರಕರಣ ದಾಖಲಿಸಬೇಕು, ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರ ನಿಯೋಗವು ನಾಳೆ ಬೆಳಗ್ಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಿದೆ. ನಿಯೋಗದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್, ಪಕ್ಷದ ಕಾರ್ಯಾಧ್ಯಕ್ಷರುಗಳಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಈಶ್ವರ್ ಖಂಡ್ರೆ, ಆರ್ ಧೃವನಾರಾಯಣ್, ಸತೀಶ್ ಜಾರಕಿಹೊಳಿ ಇರಲಿದ್ದಾರೆ.