ದೇವನಹಳ್ಳಿ (ಬೆಂಗಳೂರು): ಕಾಂಗ್ರೆಸ್ ಪಕ್ಷದಿಂದ 'ಗಾಂಧಿ ನಡಿಗೆ' ಕಾರ್ಯಕ್ರಮ ಆಯೋಜಿಸಲಾಗಿದ್ದು, ಇಂದು ದೇವನಹಳ್ಳಿಯಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ಕೊಟ್ಟರು.
ದೇವನಹಳ್ಳಿ ತಾಲೂಕಿನ ಚಿಕ್ಕಸಣ್ಣೆ ಬಳಿಯ ಖಾಸಗಿ ಕಲ್ಯಾಣ ಮಂಟಪದಲ್ಲಿ ಗಾಂಧಿ ನಡಿಗೆ ಕಾರ್ಯಕ್ರಮ ಅಯೋಜನೆ ಮಾಡಲಾಗಿದೆ. ಮೊದಲ ಬಾರಿಗೆ ದೇವನಹಳ್ಳಿಯಿಂದ ಆರಂಭವಾಗುವ ಕಾರ್ಯಾಗಾರ ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿದೆ.
'ಗಾಂಧಿ ನಡಿಗೆ' ಕಾರ್ಯಕ್ರಮಕ್ಕೆ ಚಾಲನೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ಮಾತನಾಡಿ, ಪಕ್ಷ ಸಂಘಟನೆ ಮತ್ತು ಬುನಾದಿಯಿಂದ ಪಕ್ಷ ಕಟ್ಟುವ ಕಾರಣಕ್ಕೆ ಕಾಂಗ್ರೆಸ್ ಪಕ್ಷದಿಂದ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಗಾಂಧಿ ಇಡೀ ಪ್ರಪಂಚಕ್ಕೆ ಆದರ್ಶವಾಗಿದ್ದರು. ಸತ್ಯ ಮತ್ತು ಅಹಿಂಸೆಯ ಮೂಲಕ ಭಾರತದಿಂದ ಬ್ರಿಟೀಷರನ್ನು ಓಡಿಸಿದ್ದರು. ಪ್ರಾರಂಭದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾರ್ಯಕ್ರಮ ಮಾಡಲಾಗುವುದು. ಈ ಕಾರ್ಯಕ್ರಮದ ಮೂಲಕ ಕಾರ್ಯಕರ್ತರಿಗೆ ಕಾಂಗ್ರೆಸ್ ಮತ್ತು ಗಾಂಧಿಯವರ ಮೌಲ್ಯಗಳ ಬಗ್ಗೆ ಮನವರಿಕೆ ಮಾಡಲಾಗುವುದು ಎಂದು ಹೇಳಿದರು.
ಇದನ್ನೂ ಓದಿ:ಕೆಪಿಸಿಸಿ ವತಿಯಿಂದ ದೇವನಹಳ್ಳಿ, ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 'ಗಾಂಧಿ ನಡಿಗೆ'