ಕರ್ನಾಟಕ

karnataka

ETV Bharat / city

ಸಿ ಟಿ ರವಿ-ಡಿವಿಎಸ್ ಮುಖವಾಡ.. ತಟ್ಟೆ ಹಿಡಿದು ಕಾಂಗ್ರೆಸ್ ಕಾರ್ಯಕರ್ತರಿಂದ ಭಿಕ್ಷಾಟನೆ - ಡಿ.ವಿ.ಸದಾನಂದ ಗೌಡ

ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಮುಂಭಾಗ ಡಿ.ವಿ. ಸದಾನಂದ ಗೌಡ ಹಾಗು ಸಿ.ಟಿ. ರವಿ ಹೇಳಿಕೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Congress leaders protest
ಸಿಟಿ ರವಿ-ಡಿವಿಎಸ್ ಮುಖವಾಡ ಧರಿಸಿ ಕಾಂಗ್ರೆಸ್ ಪ್ರತಿಭಟನೆ

By

Published : May 15, 2021, 12:43 PM IST

ಬೆಂಗಳೂರು: ನ್ಯಾಯಮೂರ್ತಿಗಳ ವಿರುದ್ಧ ಬಿಜೆಪಿ ನಾಯಕರ ಹೇಳಿಕೆ ಖಂಡಿಸಿ ಕೆಪಿಸಿಸಿ ನಾಯಕ ಮನೋಹರ್ ನೇತೃತ್ವದಲ್ಲಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹಾಗು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ಮುಖವಾಡ ಧರಿಸಿ, ತಟ್ಟೆ ಹಿಡಿದು ಚಿಲ್ಲರೆ ಹಣ ಭಿಕ್ಷೆ ಬೇಡುವ ಮೂಲಕ ಪ್ರತಿಭಟನೆ ನಡೆಸಲಾಯಿತು.

ಸಿಟಿ ರವಿ-ಡಿವಿಎಸ್ ಮುಖವಾಡ ಧರಿಸಿ ಕಾಂಗ್ರೆಸ್ ಪ್ರತಿಭಟನೆ

ನಗರದ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಧರಣಿ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ನ್ಯಾಯಮೂರ್ತಿಗಳ ವಿರುದ್ಧದ ಹೇಳಿಕೆ ಸರಿಯಲ್ಲ. ಹೀಗಾಗಿ, ಮೌನ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.

ಕೇಂದ್ರ ಸಚಿವ ಸದಾನಂದ ಗೌಡರ ಲಸಿಕೆ ಉತ್ಪಾದನೆ ಆಗದಿದ್ದರೆ, ನೇಣು ಹಾಕಿಕೊಳ್ಳಬೇಕಾ ಹಾಗು ಬಿಜೆಪಿ ಪ್ರದಾನ ಕಾರ್ಯದರ್ಶಿ ಸಿ.ಟಿ. ರವಿ ನ್ಯಾಯಮೂರ್ತಿಗಳು ಸರ್ವಜ್ಞರಲ್ಲ ಎಂಬ ಹೇಳಿಕೆ ವಿರುದ್ಧ ಪ್ರತಿಭಟನೆ ನಡೆಸಿದರು.

ಓದಿ:ಹೆಡ್​​ ಕಾನ್ಸ್​ಟೇಬಲ್​​ ಸಾವು: ಬ್ಲಾಕ್ ಫಂಗಸ್​ನಿಂದ ಮೃತಪಟ್ಟಿರುವ ಶಂಕೆ

ABOUT THE AUTHOR

...view details