ಬೆಂಗಳೂರು:ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಯುವ ಕಾಂಗ್ರೆಸ್ ನಾಯಕರು ಇಂದು ಪ್ರತಿಭಟನೆ ನಡೆಸಿದರು.
ರಮೇಶ್ ಜಾರಕಿಹೊಳಿ ವಿರುದ್ಧ ಯುವ ಕಾಂಗ್ರೆಸ್ ನಾಯಕರ ಪ್ರತಿಭಟನೆ - ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಕೆಲಸ ಕೇಳಿಕೊಂಡು ಹೋಗಿದ್ದ ಮಹಿಳೆಯನ್ನು ಸಚಿವ ರಮೇಶ್ ಜಾರಕಿಹೊಳಿ ಲೈಂಗಿಕತೆಗೆ ಬಳಸಿಕೊಂಡಿದ್ದಾರೆ. ತಕ್ಷಣ ಸಚಿವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದರು.
ಪ್ರತಿಭಟನೆ
ಇದನ್ನೂ ಓದಿ:ರಾಜ್ಯ ಸಚಿವರ ಸಿಡಿ ಪ್ರಕರಣ: RTI ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಹೇಳಿದ್ದೇನು?
ಯುವ ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಘೋಷಣೆ ಕೂಗಿದರು. ಕೆಲಸ ಕೇಳಿಕೊಂಡು ಹೋಗಿದ್ದ ಮಹಿಳೆಯನ್ನು ಸಚಿವ ರಮೇಶ್ ಜಾರಕಿಹೊಳಿ ಲೈಂಗಿಕತೆಗೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದರು. ಇದೇ ವೇಳೆ ಭಾವಚಿತ್ರಕ್ಕೆ ಚಪ್ಪಲಿ ಏಟು ಕೊಟ್ಟು, ದಹಿಸಿ ಪ್ರತಿಭಟಿಸಿದರು.