ಕರ್ನಾಟಕ

karnataka

ETV Bharat / city

ರಾಜಭವನಕ್ಕೆ ತೆರಳಲು ಯತ್ನಿಸಿದ ಕಾಂಗ್ರೆಸ್ ನಾಯಕರನ್ನ ಬಂಧಿಸಿದ ಪೊಲೀಸರು - ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್​ ಪ್ರತಿಭಟನೆ

ಬಿಜೆಪಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಧೋರಣೆ ಹಾಗೂ ಆಪರೇಷನ್​ ಕಮಲ ಖಂಡಿಸಿ ರಾಜಭವನಕ್ಕೆ ತೆರಳಿ ಪ್ರತಿಭಟನೆ ನಡೆಸಲು ಮುಂದಾದ ರಾಜ್ಯ ಕಾಂಗ್ರೆಸ್​​ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ.

congress-leaders-protest
ಕಾಂಗ್ರೆಸ್​ ನಾಯಕರ ಪ್ರತಿಭಟನೆ

By

Published : Jul 27, 2020, 4:00 PM IST

ಬೆಂಗಳೂರು: ರಾಜಭವನಕ್ಕೆ ತೆರಳಿ ಪ್ರತಿಭಟನೆ ನಡೆಸಲು ಮುಂದಾದ ಕಾಂಗ್ರೆಸ್ ನಾಯಕರನ್ನು ಬಂಧಿಸಿ ಕರೆದೊಯ್ಯಲಾಯಿತು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ಮೆರವಣಿಗೆ ಹೊರಟು ರಾಜಭವನಕ್ಕೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕರನ್ನು ಇಂಡಿಯನ್ ಎಕ್ಸ್​​ಪ್ರೆಸ್​​ ಕಚೇರಿ ಮುಂಭಾಗ ತಡೆದ ಪೊಲೀಸರು, ಮುಂದೆ ತೆರಳಲು ಅವಕಾಶ ನೀಡದೆ ಬಂಧಿಸಿ ಕರೆದೊಯ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರನ್ನು ಬಂಧಿಸಲಾಯಿತು.

ಕಾಂಗ್ರೆಸ್ ನಾಯಕರನ್ನ ಬಂಧಿಸಿದ ಪೊಲೀಸರು

ಇದಕ್ಕೂ ಮುನ್ನ ಕಾಂಗ್ರೆಸ್ ನಾಯಕರು ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿಲುವುಗಳನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು. ಡಿಕೆಶಿ ಹಾಗೂ ಸಿದ್ದರಾಮಯ್ಯ ಸುದೀರ್ಘ ಭಾಷಣ ಮಾಡಿ ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ಧೋರಣೆ ಖಂಡಿಸಿದರು. ಕೇಂದ್ರ ಸರ್ಕಾರ ಆಪರೇಷನ್ ಕಮಲ ನಡೆಸಿ ವಿವಿಧ ರಾಜ್ಯಗಳಲ್ಲಿ ಸ್ಥಿರವಾಗಿದ್ದ ಸರ್ಕಾರವನ್ನು ಕೆಡವಲು ಹೊರಟಿದೆ ಎಂದು ಆರೋಪಿಸಿದರು.

ಸದ್ಯ ಕೆಲ ಮುಖಂಡರ ನಿಯೋಗ ತೆರಳಿ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂಬ ಮಾಹಿತಿ ಲಭಿಸಿದೆ.

ABOUT THE AUTHOR

...view details