ಕರ್ನಾಟಕ

karnataka

ETV Bharat / city

ಸಿದ್ದು ಸವದಿ ವಿರುದ್ಧ ಸೂಕ್ತ ಕ್ರಮಕ್ಕೆ ಕಾಂಗ್ರೆಸ್​ ನಾಯಕರ ಒತ್ತಾಯ - Congress member Chandini Nayak abortion case

ಕಾಂಗ್ರೆಸ್ ಸದಸ್ಯೆ ಚಾಂದಿನಿ ನಾಯಕ್ ಗರ್ಭಪಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸಿದ್ದು ಸವದಿಯನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಬೇಕು. ಜೊತೆಗೆ ಅವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಕಾಂಗ್ರೆಸ್​ ನಾಯಕರು ಒತ್ತಾಯಿಸಿದ್ದಾರೆ.

Congress leaders
ಕಾಂಗ್ರೆಸ್​ ನಾಯಕರು

By

Published : Dec 2, 2020, 10:22 AM IST

ಬೆಂಗಳೂರು: ಕಾಂಗ್ರೆಸ್ ಸದಸ್ಯೆ ಚಾಂದಿನಿ ನಾಯಕ್ ಅವರ ಗರ್ಭಪಾತ ಪ್ರಕರಣವನ್ನು ರಾಜ್ಯ ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದೆ.

ಆಗಿದ್ದೇನು?

ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪುರಸಭೆಯಲ್ಲಿ ನ. 9ರಂದು ತೇರದಾಳ ಶಾಸಕ ಸಿದ್ದು ಸವದಿ ಪುರಸಭೆ ಚುನಾವಣೆ ಗೆಲುವಿಗಾಗಿ ದೌರ್ಜನ್ಯ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭ ಮೂರು ತಿಂಗಳ ಗರ್ಭಿಣಿಯಾಗಿದ್ದ ಚಾಂದಿನಿ ನಾಯಕರನ್ನು ಎಳೆದಾಡಲಾಗಿತ್ತು. ಆಕೆಯ ಪತಿಯ ಎದುರೇ ಮೆಟ್ಟಿಲುಗಳ ಮೇಲೆ ಅವರನ್ನು ಎಳೆದುಕೊಂಡು ಹೋಗಲಾಗಿತ್ತು. ಈ ಘಟನೆಯಿಂದಾಗಿ ಸದಸ್ಯೆ ಚಾಂದಿನಿ ನಾಯಕ್ ಅವರಿಗೆ ಗರ್ಭಪಾತ ಆಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

ಹೀಗಾಗಿ ಶಾಸಕ ಸವದಿಯನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಬೇಕು. ಜೊತೆ ಅವರನ್ನು ಬಂಧಿಸಿ ಜೊತೆಗೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಕೈ ನಾಯಕರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಗರ್ಭಪಾತ ಪ್ರಕರಣ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಪ್ರತಿಕ್ರಿಯೆ

ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಸವದಿ ವಿರುದ್ಧ ಧ್ವನಿ ಎತ್ತಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಓದಿ:ಮಹಾಲಿಂಗಪುರ ಪುರಸಭೆ ಚುನಾವಣೆ ವೇಳೆ ಗಲಾಟೆ: ಸದಸ್ಯೆಯನ್ನು ತಳ್ಳಿದ ಶಾಸಕ ಸವದಿ!

ಹೆಣ್ಣುಮಗಳ ಪರವಾಗಿ ಹೋರಾಟ: ಡಿಕೆಶಿ

ಈ ವಿಚಾರವಾಗಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಇದುವರೆಗೂ ಸಿದ್ದು ಸವದಿಯನ್ನು ಬಂಧಿಸುವ ಕಾರ್ಯ ಆಗಿಲ್ಲ. ಸದ್ಯದಲ್ಲೇ ಆ ಹೆಣ್ಣುಮಗಳ ಪರವಾಗಿ ನಾವು ಅದೇ ಕ್ಷೇತ್ರದಲ್ಲಿ ಹೋರಾಟ ಹಮ್ಮಿಕೊಳ್ಳುತ್ತೇವೆ. ಆಕೋಯ ಬೆಂಬಲಕ್ಕೆ ನಿಲ್ಲುತ್ತೇವೆ. ಸಿಎಂ ಬಿ.ಎಸ್.ಯಡಿಯೂರಪ್ಪನವರು ಸವದಿಯನ್ನು ಬಂಧಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಕೆಪಿಸಿಸಿ ಮಹಿಳಾ ಘಟಕದ ಆಕ್ರೋಶ:

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ. ಪುಷ್ಪ ಅಮರನಾಥ್, ಶಾಸಕಿ ಸೌಮ್ಯ ರೆಡ್ಡಿ, ರೂಪ ಶಶಿಧರ್, ಬಾಗಲಕೋಟೆ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಹಾಗೂ ಡಾ. ಅಕೈ ಪದ್ಮಶಾಲಿ ಸುದ್ದಿಗೋಷ್ಠಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಲೀಂ ಅಹ್ಮದ್ ಪ್ರತಿಕ್ರಿಯೆ:‌

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಕೂಡ ಘಟನೆ ಕುರಿತು ಮಾತನಾಡಿದ್ದು, ತೇರದಾಳದಲ್ಲಿ ಬಿಜೆಪಿ ಶಾಸಕ ಸವದಿ ನಡೆಸಿದ ದಬ್ಬಾಳಿಕೆಯನ್ನು ಖಂಡಿಸುತ್ತೇನೆ. ಕೂಡಲೇ ಸರ್ಕಾರ, ಸಿದ್ದು ಸವದಿ ವಿರುದ್ಧ ಕ್ರಮಕ್ಕೆ ಮುಂದಾಗಬೇಕು. ಹೆಣ್ಣುಮಗಳಿಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಕೊಡಿಸಿ, ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ಕೊಡುವ ಕೆಲಸ ಸರ್ಕಾರ ಮಾಡಬೇಕು ಎಂದಿದ್ದಾರೆ.

ABOUT THE AUTHOR

...view details