ಬೆಂಗಳೂರು :ಕೊರೊನಾ ಪಾಸಿಟಿವ್ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಆರೋಗ್ಯ ಚೇತರಿಕೆಗೆ ರಾಜ್ಯ ಕಾಂಗ್ರೆಸ್ ನಾಯಕರು ಹಾರೈಸಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿ ರಾಜ್ಯ ಕಾಂಗ್ರೆಸ್ ನಾಯಕರು ಮನಮೋಹನ್ ಸಿಂಗ್ ಆರೋಗ್ಯ ಚೇತರಿಕೆಗೆ ಹಾರೈಸಿ ಟ್ವೀಟ್ ಮಾಡಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಟ್ವೀಟ್ನಲ್ಲಿ, ಮಾಜಿ ಪ್ರಧಾನಿ ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಡಾ.ಮನಮೋಹನ್ ಸಿಂಗ್ ಅವರು ಕೊರೊನಾ ಸೋಂಕಿಗೆ ಒಳಗಾಗಿರುವುದು ತಿಳಿದು ಬೇಸರವಾಯಿತು. ಅವರು ಶೀಘ್ರ ಗುಣಮುಖರಾಗಿ ಮರಳಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.