ಕರ್ನಾಟಕ

karnataka

ETV Bharat / city

ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಆರಂಭ: ಶರತ್ ಬಚ್ಚೇಗೌಡ ಭಾಗಿ - ಶರತ್ ಬಚ್ಚೇಗೌಡ

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಆರಂಭವಾಗಿದ್ದು, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಗೃಹ ಸಚಿವರಾದ ರಾಮಲಿಂಗಾರೆಡ್ಡಿ, ಮಾಜಿ ಸಚಿವರಾದ ಪ್ರಿಯಾಂಕ ಖರ್ಗೆ, ಯು.ಟಿ. ಖಾದರ್, ಜಮೀರ್ ಅಹ್ಮದ್, ಮುಖ್ಯ ಸಚೇತಕ ಅಜಯ್ ಸಿಂಗ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್, ವಿಧಾನಪರಿಷತ್ ಸದಸ್ಯ ನಾರಾಯಣಸ್ವಾಮಿ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತಿತರು ಭಾಗಿಯಾಗಿದ್ದಾರೆ.

congress legislative meeting
congress legislative meeting

By

Published : Mar 4, 2021, 11:02 AM IST

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಆರಂಭವಾಗಿದೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಆರಂಭವಾಗಿರುವ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಗೃಹ ಸಚಿವರಾದ ರಾಮಲಿಂಗಾರೆಡ್ಡಿ, ಮಾಜಿ ಸಚಿವರಾದ ಪ್ರಿಯಾಂಕ ಖರ್ಗೆ, ಯು.ಟಿ. ಖಾದರ್, ಜಮೀರ್ ಅಹ್ಮದ್, ಮುಖ್ಯ ಸಚೇತಕ ಅಜಯ್ ಸಿಂಗ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್, ವಿಧಾನಪರಿಷತ್ ಸದಸ್ಯ ನಾರಾಯಣಸ್ವಾಮಿ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತಿತರು ಭಾಗಿಯಾಗಿದ್ದಾರೆ.

ಒಂದು ರಾಷ್ಟ್ರ ಒಂದು ಚುನಾವಣೆ ಬಜೆಟ್ ಅಧಿವೇಶನದಲ್ಲಿ ನಡೆಸಬಹುದಾದ ಚರ್ಚೆ ಹಾಗೂ ಧರ್ಮೇಗೌಡ ನಿಧನದಿಂದ ತೆರವಾಗಿರುವ ಪರಿಷತ್ ಸ್ಥಾನಕ್ಕೆ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಲಾಗುತ್ತಿದೆ.

ಪಕ್ಷೇತರ ಶಾಸಕ ಹಾಜರು:

ಇತ್ತೀಚೆಗಷ್ಟೇ ಕಾಂಗ್ರೆಸ್​ಗೆ ಬೆಂಬಲ ಘೋಷಿಸಿರುವ ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಶಾಸಕಾಂಗ ಸಭೆಗೆ ಹಾಜರಾದರು. ಪಕ್ಷದ ಸಹ ಸದಸ್ಯತ್ವ ಸ್ವೀಕರಿಸಿದ ಅವರು, ಕಾಂಗ್ರೆಸ್​ಗೆ ತಮ್ಮ ಬಾಹ್ಯ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರದ ಕೆಲ ನೀತಿ ನಿಲುವುಗಳನ್ನು ಖಂಡಿಸಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದ್ದು, ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ಸಚಿವರುಗಳ ಅವ್ಯವಹಾರಗಳ ಕುರಿತು ಸಭೆಯಲ್ಲಿ ಯಾವ ರೀತಿ ಚರ್ಚೆ ನಡೆಸಬೇಕು ಎಂಬ ಕುರಿತು ಮಹತ್ವದ ಸಮಾಲೋಚನೆಯನ್ನು ಕಾಂಗ್ರೆಸ್ ನಾಯಕರು ನಡೆಸಿದ್ದಾರೆ.

ಇನ್ನು ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ವಿಧಾನಮಂಡಲದ ಉಭಯ ಸದನಗಳಲ್ಲಿ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ಒತ್ತಡ ಹೇರುವ ಚರ್ಚೆಗೆ ಮನವಿ ಮಾಡಲು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಕಾಂಗ್ರೆಸ್​ಗೆ ಶರತ್ ಪರಿಚಯ:

ಕಾಂಗ್ರೆಸ್ ಶಾಸಕಾಂಗ ಸಭೆಗೆ ಆಗಮಿಸಿದ ಶರತ್ ಬಚ್ಚೇಗೌಡ ಅವರನ್ನು ಪ್ರತಿಪಕ್ಷನಾಯಕ ಸಿದ್ದರಾಮಯ್ಯ ಸ್ವಾಗತಿಸಿ ಬರಮಾಡಿಕೊಂಡರು. ಇತ್ತೀಚೆಗಷ್ಟೇ ಅವರು ನಮ್ಮ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ನಮ್ಮ ಜೊತೆ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಕೈ ಜೋಡಿಸುತ್ತಾರೆ. ಬಹುತೇಕ ಎಲ್ಲ ಸದಸ್ಯರಿಗೂ ಇವರ ಪರಿಚಯ ಇದೆ. ಈಗಾಗಲೇ ವಿಧಾನಸಭೆಯಲ್ಲಿ ಅವರು ಒಂದೆರಡು ಸಾರಿ ಭಾಷಣ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷದ ಬೆಂಬಲ ಅವರಿಗೆ ಇರಲಿದೆ ಹಾಗೂ ಅವರ ಬೆಂಬಲ ಪಕ್ಷಕ್ಕೆ ಲಭಿಸಲಿದೆ ಎಂದು ತಿಳಿಸಿದರು.

ABOUT THE AUTHOR

...view details