ಕರ್ನಾಟಕ

karnataka

ETV Bharat / city

ಸಿಎಲ್​ಪಿ ಸಭೆ: ಪರಿಷತ್ ಉಪಸಭಾಪತಿ ಚುನಾವಣೆಗೆ ಅಭ್ಯರ್ಥಿ ಕಣಕ್ಕಿಳಿಸಲು ಕಾಂಗ್ರೆಸ್​ ತೀರ್ಮಾನ - ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್

ಪರಿಷತ್ ಉಪಸಭಾಪತಿ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಹತ್ವದ ಚರ್ಚೆ ನಡೆದಿದ್ದು, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಸಿಎಲ್​ಪಿ ನಾಯಕ ಸಿದ್ದರಾಮಯ್ಯ ಅವರು ತಮ್ಮ ಅಭ್ಯರ್ಥಿಯನ್ನು ಸ್ಪರ್ಧೆಗಿಳಿಸಲು ನಿರ್ಧರಿಸಿದ್ದಾರೆ.

Congress Legislative Party Meeting
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

By

Published : Jan 28, 2021, 11:06 AM IST

ಬೆಂಗಳೂರು: ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಹಲವು ಮಹತ್ವದ ವಿಚಾರಗಳ ಚರ್ಚೆ ನಡೆದಿದೆ.

ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ರಾಮಲಿಂಗಾರೆಡ್ಡಿ, ಧ್ರುವ ನಾರಾಯಣ, ಹಿರಿಯ ನಾಯಕರಾದ ಡಾ. ಜಿ.ಪರಮೇಶ್ವರ, ಕೆ.ಜೆ. ಜಾರ್ಜ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದು, ಅತ್ಯಂತ ಗಂಭೀರವಾಗಿ ಸರ್ಕಾರದ ವಿರುದ್ಧ ನಡೆಸಬಹುದಾದ ಹೋರಾಟಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಅಧಿವೇಶನ ನಡೆಸದೆ, ಉತ್ತರ ಕರ್ನಾಟಕ ನಿರ್ಲಕ್ಷ್ಯ ಮಾಡಿರುವುದಕ್ಕೆ ಧಿಕ್ಕಾರ ಗೂಗಲ್ ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ. ರಾಜ್ಯಪಾಲರ ಭಾಷಣದ ವೇಳೆ ಈ ಸ್ಲೋಗನ್​ನೊಂದಿಗೆ ಭಿತ್ತಿಪತ್ರ ಪ್ರದರ್ಶನಕ್ಕೆ ಕಾಂಗ್ರೆಸ್ ನಿರ್ಧರಿಸಿದೆ. ಸದನದಲ್ಲೂ ಭಿತ್ತಿಪತ್ರ ಪ್ರದರ್ಶಿಸಲು ಸಿಎಲ್​ಪಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂಬ ಮಾಹಿತಿ ಇದೆ.

ಅಭ್ಯರ್ಥಿ ಹಾಕಲು ನಿರ್ಧಾರ:

ಉಪಸಭಾಪತಿ ಚುನಾವಣೆಗೆ ಅಭ್ಯರ್ಥಿ ಹಾಕಲು ಕಾಂಗ್ರೆಸ್ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಹತ್ವದ ಚರ್ಚೆ ನಡೆದಿದ್ದು, ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಜೆಡಿಎಸ್​​ನ ಬಣ್ಣ ಬಯಲು ಮಾಡುವ ಆಶಯವನ್ನು ಹಲವು ಸದಸ್ಯರು ವ್ಯಕ್ತಪಡಿಸಿದ್ದಾರೆ. ಪರಿಷತ್ ಸದಸ್ಯರ ಒತ್ತಾಯಕ್ಕೆ ಮಣಿದ ಸಿದ್ದರಾಮಯ್ಯ, ಡಿಕೆಶಿ ಅವರು ಅಭ್ಯರ್ಥಿಯಾಗಿ ಕೆ ಸಿ ಕೊಂಡಯ್ಯ ಅವರನ್ನು ಆಯ್ಕೆ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ಸದಸ್ಯ ಕೆ.ಸಿ. ಕೊಂಡಯ್ಯ ಕಾಂಗ್ರೆಸ್ ಉಪಸಭಾಪತಿ ಕ್ಯಾಂಡಿಡೇಟ್ ಆಗಲಿದ್ದಾರೆ. ಕೆಲವೇ ಕ್ಷಣಗಳಲ್ಲಿ ಉಮೇದುವಾರಿಕೆ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಇದೆ.

ಶಾಸಕಾಂಗ ಸಭೆಗೆ ಅಪರೂಪಕ್ಕೆ ಆಗಮಿಸಿದ ನಾಗೇಂದ್ರ:ವಿಧಾನಸಭೆ ಸದಸ್ಯ ನಾಗೇಂದ್ರ ಬಹಳ ಸಮಯದ ನಂತರ ಶಾಸಕಾಂಗ ಸಭೆಗೆ ಆಗಮಿಸಿದರು. ಕಳೆದ ಕೆಲ ತಿಂಗಳಿಂದ ಪಕ್ಷದ ಬಹುತೇಕ ಚಟುವಟಿಕೆಗಳಿಗಿಂತ ದೂರವೇ ಉಳಿದಿದ್ದ ಅವರು, ಇಂದು ಶಾಸಕಾಂಗ ಸಭೆಗೆ ಹಾಜರಾಗಿದ್ದರು.

ABOUT THE AUTHOR

...view details