ಕರ್ನಾಟಕ

karnataka

ETV Bharat / city

ಕೊರೊನಾ: ಕಾಂಗ್ರೆಸ್ ಕಾರ್ಯಪಡೆ ಮೊದಲ ಸಭೆ - bangalore

ಪ್ರತಿಪಕ್ಷವಾಗಿ ತನ್ನ ಕಾರ್ಯನಿರ್ವಹಣೆಯನ್ನು ಸಮರ್ಥವಾಗಿ ನಿಭಾಯಿಸುವ ಸಲುವಾಗಿ ಕಾಂಗ್ರೆಸ್ ಟಾಸ್ಕ್ ಪೋರ್ಸ್ ನಿರ್ಮಿಸಿದ್ದು, ಇದರ ಮೊದಲ ಸಭೆ ಇಂದು ಬೆಳಗ್ಗೆ ನಡೆಯಿತು.

cong
cong

By

Published : Mar 31, 2020, 11:44 AM IST

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣ ಹಾಗೂ ಪರಿಸ್ಥಿತಿ ನಿರ್ವಹಣೆಗೆ ರಚಿಸಲಾಗಿರುವ ಕಾಂಗ್ರೆಸ್ ಕಾರ್ಯಪಡೆಯ ಮೊದಲ ಸಭೆ ಇಂದು ಬೆಳಗ್ಗೆ ನಡೆಯಿತು.

ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರು, ಕಾರ್ಯಪಡೆಯ ಮುಖ್ಯಸ್ಥರು ಹಾಗೂ ಸದಸ್ಯರು ಭಾಗವಹಿಸಿದರು.

ಪ್ರತಿಪಕ್ಷವಾಗಿ ತನ್ನ ಕಾರ್ಯನಿರ್ವಹಣೆಯನ್ನು ಸಮರ್ಥವಾಗಿ ನಿಭಾಯಿಸುವ ಸಲುವಾಗಿ ಕಾಂಗ್ರೆಸ್ ಈ ಟಾಸ್ಕ್ ಪೋರ್ಸ್ ನಿರ್ಮಿಸಿದ್ದು ಇದರ ಮೂಲಕ ರಾಜ್ಯ ಸರ್ಕಾರಕ್ಕೆ ತನ್ನ ಸಲಹೆ ಸೂಚನೆಗಳನ್ನು ಒಳಗೊಂಡ ವರದಿಯನ್ನು ನೀಡಲಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮಿತಿಯನ್ನು ರಚಿಸಿದ್ದು ಈಗಾಗಲೇ ಸಮಿತಿಯ ಅಧ್ಯಕ್ಷ ರಮೇಶ್ ಕುಮಾರ್ ಜೊತೆ ಚರ್ಚೆ ಕೂಡ ನಡೆಸಿದ್ದಾರೆ.

ABOUT THE AUTHOR

...view details