ಬೆಂಗಳೂರು:ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ವಿವಿಧ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆಯುವ ವಿಧಾನಸಭೆ ಉಪಚುನಾವಣೆ ವೀಕ್ಷಕರ ಸಭೆ ನಡೆಯುತ್ತಿದೆ.
ಕೆಪಿಸಿಸಿ ಕಚೇರಿಯಲ್ಲಿ ಉಪಚುನಾವಣೆಗೆ ನಿಯೋಜಿತರಾದ ವೀಕ್ಷಕರ ಸಭೆ
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ವಿವಿಧ ಜಿಲ್ಲೆಗಳ ವ್ಯಾಪ್ತಿಯಲ್ಲಿ ವಿಧಾನಸಭೆ ಉಪಚುನಾವಣೆ ವೀಕ್ಷಕರ ಸಭೆ ನಡೆಯುತ್ತಿದೆ.
ಮುಂಬರುವ ವಿಧಾನಸಭೆ ಉಪಚುನಾವಣೆ ಗೆಲುವನ್ನ ಪ್ರತಿಷ್ಠೆಯಾಗಿ ಪರಿಗಣಿಸಿರುವ ಕಾಂಗ್ರೆಸ್, 15 ಕ್ಷೇತ್ರಗಳ ಪೈಕಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವಿನ ಗುರಿ ಸಾಧಿಸುವ ನಿರೀಕ್ಷೆ ಇರಿಸಿಕೊಂಡಿದೆ. ಕಾಂಗ್ರೆಸ್ ಈ ಬಾರಿ ಎಲ್ಲಾ ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದ್ದು, ಜೆಡಿಎಸ್ ಹಾಗೂ ಬಿಜೆಪಿಯನ್ನು ಹೇಗೆ ಎದುರಿಸಬೇಕು ಎನ್ನುವ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ.
ಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳನ್ನು ಕಾಂಗ್ರೆಸ್ ಕಳೆದುಕೊಂಡಿದ್ದು, ಶಾಸಕರ ರಾಜೀನಾಮೆ ಹಾಗೂ ನಂತರ ಅನರ್ಹತೆಯಿಂದ ತೆರವಾಗಿರುವ ಈ ಕ್ಷೇತ್ರಗಳನ್ನು ಮರಳಿ ಪಡೆಯುವ ಗುರಿ ಹಾಕಿಕೊಂಡಿದೆ. ಈ ನಿಟ್ಟಿನಲ್ಲಿ ಇಂದು ಮಹತ್ವದ ಸಭೆ ನಡೆಸಿ ಗೆಲುವಿನ ರೂಪುರೇಷೆ ಹೆಣೆಯುತ್ತಿದೆ.