ಬೆಂಗಳೂರು:ರಾಜ್ಯಸಭೆ ಚುನಾವಣೆ ಘೋಷಣೆಯಾಗಿದ್ದು, ಆಯಾ ಪಕ್ಷಗಳು ತಮ್ಮ ಅಭ್ಯರ್ಥಿಗಳ ಆಯ್ಕೆಗೆ ಸಿದ್ಧತೆ ನಡೆಸಿವೆ. ಕರ್ನಾಟಕದಿಂದ ಮತ್ತೊಮ್ಮೆ ರಾಜ್ಯಸಭೆಗೆ ಆಯ್ಕೆ ಬಯಸಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕೊಡುಗೆಯನ್ನು ಕಾಂಗ್ರೆಸ್ ಪ್ರಶ್ನಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ನೀಡಿದ ಕೊಡುಗೆಯನ್ನು ವಿವರಿಸಬೇಕು ಎಂದು ಒತ್ತಾಯಿಸಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರನ್ನು ಮತ್ತೊಮ್ಮೆ ರಾಜ್ಯಸಭೆಗೆ ಆಯ್ಕೆ ಮಾಡಲು ರಾಜ್ಯ ಬಿಜೆಪಿ ನಿರ್ಧರಿಸಿದೆ. ಅಭ್ಯರ್ಥಿಗಳ ಆಯ್ಕೆ ಆಯಾ ಪಕ್ಷದ ಆಂತರಿಕ ವಿಚಾರವಾಗಿದೆ. ಆದರೆ, ರ್ನಿಮಲಾ ಅವರು ಕರ್ನಾಟಕದಿಂದ ಆಯ್ಕೆಯಾಗಿ ನಮ್ಮ ರಾಜ್ಯಕ್ಕೆ ಏನು ಮಾಡಿದ್ದಾರೆ? ಅವರನ್ನು ಮತ್ತೊಮ್ಮೆ ರಾಜ್ಯಸಭೆಗೆ ಕಳಿಸುವ ಅವಶ್ಯಕತೆ ಏನಿದೆ? ನಿರ್ಮಲಾ ಸೀತಾರಾಮನ್ 15 ನೇ ಹಣಕಾಸು ಆಯೋಗ ಶಿಫಾರಸು ಮಾಡಿದ್ದ 5495 ಕೋಟಿ ಅನುದಾನಕ್ಕೂ ಕತ್ತರಿ ಹಾಕಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.