ಕರ್ನಾಟಕ

karnataka

ETV Bharat / city

'ಬೆಲೆಯೇರಿಕೆ ಮುಕ್ತ ಭಾರತ'ಕ್ಕೆ ಕಾಂಗ್ರೆಸ್ ಆಗ್ರಹ: ಸಿಲಿಂಡರ್​ಗೆ ಹಾರ ಹಾಕಿ ಪ್ರತಿಭಟನೆ - ಸಿಲಿಂಡರ್​ಗೆ ಹಾರ ಹಾಕಿ ಪ್ರತಿಭಟನೆ

ರಾಜ್ಯದ ಜನ ದಡ್ಡರಲ್ಲ. ಅವರು ಅವಕಾಶಕ್ಕಾಗಿ ಕಾದು ಕುಳಿತಿದ್ದಾರೆ. ಅವಕಾಶ ಸಿಕ್ಕಾಗ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವ ಮೂಲಕ ಅವರ ನಿತ್ಯದ ನೋವು ಹೊರಹಾಕಲಿದ್ದಾರೆ ಎಂಬ ನಂಬಿಕೆ ಇದೆ. ನಾವು ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಡಿಕೆಶಿ ಹೇಳಿದ್ದಾರೆ.

congress-protest-aginst-price-hike
ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್​ ಪ್ರತಿಭಟನೆ

By

Published : Mar 31, 2022, 1:45 PM IST

ಬೆಂಗಳೂರು: ಪೆಟ್ರೋಲ್, ಡಿಸೇಲ್, ಎಲ್​ಪಿಜಿ, ಸಿನ್​ಜಿ ಮತ್ತು ಪಿಎನ್​ಜಿ ಮತ್ತಿತರ ಅಗತ್ಯ ವಸ್ತುಗಳ ಬೆಲೆ ಹೆಚ್ಚಳದ ವಿರುದ್ಧ ಎಐಸಿಸಿ ದೇಶಾದ್ಯಂತ ಹಮ್ಮಿಕೊಂಡಿರುವ 'ಬೆಲೆಯೇರಿಕೆ ಮುಕ್ತ ಭಾರತ ಅಭಿಯಾನ'ದ ಭಾಗವಾಗಿ ಕೆಪಿಸಿಸಿ ಬೆಂಗಳೂರಿನ ಕಚೇರಿ ಎದುರು ಪ್ರತಿಭಟನೆ ನಡೆಸಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಕಾರ್ಯಧ್ಯಕ್ಷರಾದ ಸಲೀಂ ಅಹ್ಮದ್, ರಾಮಲಿಂಗಾರೆಡ್ಡಿ, ಧ್ರುವನಾರಾಯಣ ಮತ್ತಿತರ ಮುಖಂಡರು ಭಾಗವಹಿಸಿದ್ದರು.

ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್​ ಪ್ರತಿಭಟನೆ

ದ್ವಿಚಕ್ರ ವಾಹನ ಹಾಗೂ ಅಡುಗೆ ಅನಿಲ ಸಿಲಿಂಡರ್​ಗೆ ಹೂವಿನ ಹಾರ ಹಾಕಿ ಪೂಜೆ ಮಾಡಿ ಪ್ರತಿಭಟನೆ ನಡೆಸಿದರು. ಇದಕ್ಕೂ ಮೊದಲು ಶಿವಕುಮಾರ್ ಅವರು ಬೆಳಗ್ಗೆ ತಮ್ಮ ಸದಾಶಿವನಗರದ ನಿವಾಸದ ಬಳಿ ಅಡುಗೆ ಅನಿಲದ ಸಿಲಿಂಡರ್​ಗೆ ಹೂ-ಹಾರ ಹಾಕಿ, ಚಪ್ಪಾಳೆ ತಟ್ಟುವ ಮೂಲಕ ಪ್ರತಿಭಟನೆ ಮಾಡಿದರು. ನಂತರ ಕೆಪಿಸಿಸಿ ಕಚೇರಿಯಲ್ಲಿ ದ್ವಿಚಕ್ರ ವಾಹನ ಹಾಗೂ ಅಡುಗೆ ಸಿಲಿಂಡರ್​ಗೆ ಗಂಟೆ ಬಾರಿಸಿ ಪೂಜೆ ಮಾಡಿದರು.

11 ದಿನದಲ್ಲಿ 10ನೇ ಬಾರಿ ದರ ಏರಿಕೆ:ಕೆಪಿಸಿಸಿ ಕಚೇರಿಯಲ್ಲಿ ನಡೆದ ಪ್ರತಿಭಟನೆ ಸಂದರ್ಭ ಮಾತನಾಡಿದ ಡಿ.ಕೆ.ಶಿವಕುಮಾರ್, ಇಂದು ಮಾರ್ಚ್ 31 ಆರ್ಥಿಕ ವರ್ಷ ಮುಕ್ತಾಯದ ದಿನ. ಹೀಗಾಗಿ ಇಂದು ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ. ಕಳೆದ 11 ದಿನಗಳಲ್ಲಿ ಕೇಂದ್ರ ಸರ್ಕಾರ 10 ಬಾರಿ ಇಂಧನ ಬೆಲೆ ಏರಿಕೆ ಮಾಡಿದೆ. ನಿತ್ಯ ಜನರ ಜೇಬು ಪಿಕ್ ಪಾಕೆಟ್ ಆಗುತ್ತಿದೆ. ಎಲ್ಲರ ಆದಾಯ ಡಬಲ್ ಮಾಡುತ್ತೇವೆ ಎಂದಿದ್ದ ಬಿಜೆಪಿ ಸರ್ಕಾರದ ಬೆಲೆ ಏರಿಕೆ ಗಗನಕ್ಕೇರಿದೆ. ಆದಾಯ ಪಾತಳಕ್ಕೆ ಹೋಗಿದೆ. ಹೀಗಾಗಿ ನಾವು ಈ ಪ್ರತಿಭಟನೆ ಮಾಡುತ್ತಿದ್ದೇವೆ ಎಂದರು.

35 ರೂ ಏರಿಕೆ:ವಾಹನ ಸವಾರರಿಂದ ಹಿಡಿದು, ಗೃಹಿಣಿಯವರೆಗೂ ಎಲ್ಲರೂ ನಿತ್ಯ ನೋವು ಅನುಭಿಸುತ್ತಿದ್ದಾರೆ. ಈಗಾಗಲೇ ಸುಮಾರು 35 ರೂ. ಏರಿಕೆಯಾಗಿದ್ದು, ಪೆಟ್ರೋಲ್ ಬೆಲೆ 111 ರೂ. ಮುಟ್ಟಿದೆ. ಇದರ ವಿರುದ್ಧ ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ಹೋರಾಟ ಮಾಡುತ್ತಿದ್ದು, ನಮ್ಮ ಮನೆಗಳ ಮುಂದೆ ಅಡುಗೆ ಅನಿಲ ಸಿಲಿಂಡರ್, ವಾಹನಗಳಿಗೆ ಹೂವಿನ ಹಾರ ಹಾಕಿ ಪೂಜೆ ಮಾಡಿದ್ದೇವೆ ಎಂದರು.

ಕಾಂಗ್ರೆಸ್ ಕಚೇರಿ ಮುಂದೆ ನಾನು, ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯು, ನಮ್ಮ ಕಾರ್ಯಾಧ್ಯಕ್ಷರು, ಎಐಸಿಸಿ ನಾಯಕರು ಪ್ರತಿಭಟನೆ ಮಾಡುತ್ತಿದ್ದೇವೆ. ರಾಜ್ಯದ ಜನ ದಡ್ಡರಲ್ಲ. ಅವರು ಅವಕಾಶಕ್ಕಾಗಿ ಕಾದು ಕುಳಿತಿದ್ದಾರೆ. ಅವಕಾಶ ಸಿಕ್ಕಾಗ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಬಿಜೆಪಿ ಸರ್ಕಾರ ಕಿತ್ತೊಗೆಯುವ ಮೂಲಕ ಅವರ ದಿನನಿತ್ಯದ ನೋವನ್ನು ಹೊರಹಾಕಲಿದ್ದಾರೆ ಎಂಬ ನಂಬಿಕೆ ಇದೆ. ನಾವು ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ:ಸರ್ಕಾರ ಬಡವರ ಹಣ ಕದ್ದು ಕೈಗಾರಿಕೋದ್ಯಮಿಗಳಿಗೆ ನೀಡ್ತಿದೆ; ತೈಲ ಬೆಲೆ ಏರಿಕೆಗೆ ರಾಹುಲ್‌ ಗಾಂಧಿ ಕಿಡಿ

ಪಂಚರಾಜ್ಯ ಚುನಾವಣೆ ನಡೆಯುವಾಗ ತಡೆಯಲಾಗಿದ್ದ ಬೆಲೆ ಏರಿಕೆ, ಫಲಿತಾಂಶ ಬಂದ ನಂತರ ಮತ್ತೆ ಆರಂಭವಾಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ, ‘ಅವರು ತಡೆ ಹಿಡಿದಿದ್ದರೋ ಇಲ್ಲವೋ, ಜನರಿಗಂತೂ ಪ್ರಾಣ ಹಿಂಡುತ್ತಿದ್ದಾರೆ. ನಮ್ಮ ಹಳ್ಳಿಕಡೆ ಒಂದು ಮಾತಿದೆ. 100 ಚಪ್ಪಲಿ ಏಟು ತಿನ್ನಬಹುದು, ಆದರೆ ದುಡ್ಡಿನ ಏಟು ಮಾತ್ರ ತಡೆಯಲು ಆಗುವುದಿಲ್ಲ. ಅದೇ ರೀತಿ ಈ ಸರ್ಕಾರ ದಿನನಿತ್ಯ ಜನರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ’ ಎಂದರು.

ಜನರ ಸಮಸ್ಯೆಗಳ ಬದಲು ಭಾವನಾತ್ಮಕ ವಿಚಾರ ಚುನಾವಣೆ ಅಜೆಂಡಾ ಆಗುತ್ತಿದೆಯೇ ಎಂಬ ಪ್ರಶ್ನೆಗೆ, ‘ಅವರು ಸಮಾಜ ಒಡೆಯುವವರಾದರೆ, ನಾವು ಸಮಾಜವನ್ನು ಒಂದು ಮಾಡುತ್ತೇವೆ. ಇದೇ ನಮಗೂ ಅವರಿಗೂ ಇರುವ ವ್ಯತ್ಯಾಸ’ ಎಂದು ಉತ್ತರಿಸಿದರು.

ABOUT THE AUTHOR

...view details