ಬೆಂಗಳೂರು: ಧಾರವಾಡ ಅಲ್ಪಸಂಖ್ಯಾತ ವಿಭಾಗದ ಮುಖಂಡ ಇಮ್ರಾನ್ ಮಹಮ್ಮದ್ ಶಫಿ ಕಳ್ಳಿಮನಿ ಅವರ ಉಚ್ಚಾಟನೆ ಆದೇಶವನ್ನು ರಾಜ್ಯ ಕಾಂಗ್ರೆಸ್ ಹಿಂಪಡೆದಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಚನೆ ಮೇರೆಗೆ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಈ ಆದೇಶ ಹೊರಡಿಸಿದ್ದಾರೆ. ಇಮ್ರಾನ್ ಅವರು ಧಾರವಾಡ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಇಮ್ರಾನ್ರನ್ನ ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಕ್ಷಮೆ ಕೇಳಿದ ಹಿನ್ನೆಲೆ ಉಚ್ಚಾಟನಾ ಆದೇಶವನ್ನು ಕೆಪಿಸಿಸಿ ಅಧ್ಯಕ್ಷರ ಅನುಮೋದನೆಯ ಮೇರೆಗೆ ರದ್ದುಪಡಿಸಲಾಗಿದೆ.
ಧಾರವಾಡ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ನೀಡಿದ್ದ ಶಿಫಾರಸ್ಸಿನ ಮೇರೆಗೆ ಮತ್ತು ಪ್ರದೇಶ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿಯ ಶಿಫಾರಸ್ಸಿನಂತೆ ಈ ಆದೇಶವನ್ನು ಜಾರಿಗೊಳಿಸಲಾಗಿದೆ.