ಬೆಂಗಳೂರು: 2015, ಡಿಸೆಂಬರ್ 31ರ ಅಂತ್ಯಕ್ಕೆ ನಿವೃತ್ತಿ, ಮರಣ, ರಾಜೀನಾಮೆ ಇತರೆ ಕಾರಣಗಳಿಂದ ಖಾಲಿಯಾಗಿರುವ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಶಿಕ್ಷಣ ಸಂಸ್ಥೆಗಳಲ್ಲಿನ ಹುದ್ದೆಗಳನ್ನು ತುಂಬಲು ಆರ್ಥಿಕ ಇಲಾಖೆ ಸಹಮತಿ ನೀಡಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಹಣಕಾಸು ಇಲಾಖೆ ಪರಿಶೀಲಿಸಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿನ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ದಿನಾಂಕ 2015, ಡಿಸೆಂಬರ್ 31ರ ಅಂತ್ಯಕ್ಕೆ ನಿವೃತ್ತಿ, ಮರಣ, ರಾಜೀನಾಮೆ ಇತರೆ ಕಾರಣಗಳಿಂದ ಖಾಲಿಯಾಗಿರುವ ಹುದ್ದೆಗಳ ಪೈಕಿ, ಈಗಾಗಲೇ ಸರ್ಕಾರದಿಂದ ಅನುಮೋದನೆಗೊಂಡಿದೆ.