ಬೆಂಗಳೂರು:ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಗಲಾಟೆ ಬಿಡಿಸಲು ಹೋದ ಹೆಡ್ ಕಾನ್ಸ್ಟೇಬಲ್ಗೇ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ.
ಜಗಳ ಬಿಡಿಸಲು ಹೋದ ಹೆಡ್ ಕಾನ್ಸ್ಟೇಬಲ್ಗೆ ದುಷ್ಕರ್ಮಿಗಳಿಂದ ಚಾಕು ಇರಿತ! - Stab the knife for going to quarrel
ಗಲಾಟೆ ಬಿಡಿಸಲು ಹೋದ ಹೆಡ್ ಕಾನ್ಸ್ಟೇಬಲ್ಗೇ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ.
ಹೆಡ್ ಕಾನ್ಸ್ಟೇಬಲ್ ನಾಗರಾಜ್
ಗಾಯಗೊಂಡ ಹೆಡ್ ಕಾನ್ಸ್ಟೇಬಲ್ ನಾಗರಾಜ್ ಅವರು ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಚಾಮುಂಡಿನಗರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆಯುತ್ತಿದ್ದಾಗ ಕೂಡಲೇ ಸಾರ್ವಜನಿಕರು ಆರ್.ಟಿ.ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸಿವಿಲ್ ಡ್ರೆಸ್ನಲ್ಲಿದ್ದ ನಾಗರಾಜ್ ಸ್ಥಳಕ್ಕೆ ತೆರಳಿ ಜಗಳ ಬಿಡಿಸಲು ಮುಂದಾಗಿದ್ದಾರೆ. ಈ ವೇಳೆ ಗುಂಪಿನಲ್ಲಿದ್ದ ಕೋಪದಿಂದ ನಾಗರಾಜ್ ಹೊಟ್ಟೆಗೆ ಎರಡು ಬಾರಿ ಇರಿದು ಪರಾರಿಯಾಗಿದ್ದಾರೆ.ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ನಾಗರಾಜ್ ಅವರನ್ನು ಸ್ಥಳೀಯರೇ ಆಸ್ಪತ್ರೆಗೆ ದಾಖಲಿಸಿದ್ದಾರೆ.