ಕರ್ನಾಟಕ

karnataka

ETV Bharat / city

ಮಹಾ ಪಾಠ: ರಾಜ್ಯದ ಪತ್ರಕರ್ತರಿಗೆ ಆರೋಗ್ಯ ತಪಾಸಣಾ ಶಿಬಿರ ನಡೆಸಲು ಸಿಎಂ ಸೂಚನೆ - ಕೊರೊನಾ ವೈರಸ್​ ಅಪ್​ಡೇಟ್​

ಮುಂಬೈನಲ್ಲಿ ವಿವಿಧ ಮಾಧ್ಯಮ ಸಂಸ್ಥೆಗಳ ವರದಿಗಾರರು, ಕ್ಯಾಮರಾಮೆನ್​ ಸೇರಿದಂತೆ ಒಟ್ಟು 53 ಪತ್ರಕರ್ತರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕಾರಣದಿಂದ ರಾಜ್ಯ ಸರ್ಕಾರ ಎಚ್ಚೆತ್ತಿದೆ.

CM instructs journalists to conduct health check-up camp
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

By

Published : Apr 21, 2020, 12:07 PM IST

ಬೆಂಗಳೂರು:ಮುಂಬೈನಲ್ಲಿ 53 ಪತ್ರಕರ್ತರಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ ರಾಜ್ಯದ ಪತ್ರಕರ್ತರಿಗೂ ಆರೋಗ್ಯ ತಪಾಸಣೆ ನಡೆಸಲು ನಿರ್ಧರಿಸಿದೆ.

ತಕ್ಷಣವೇ ಆರೋಗ್ಯ ತಪಾಸಣಾ‌ ಶಿಬಿರ ಆಯೋಜಿಸುವಂತೆ ವಾರ್ತಾ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದೆ.

ಮುಂಬೈನಲ್ಲಿ ಆರೋಗ್ಯ ತಪಾಸಣಾ ಶಿಬಿರ ನಡೆಸಿ 171 ಪತ್ರಕರ್ತರ ಮಾದರಿ ಸಂಗ್ರಹ ಮಾಡಲಾಗಿತ್ತು. ಅದರಲ್ಲಿ‌ 53 ಪತ್ರಕರ್ತರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸರ್ಕಾರದ ಆದೇಶ

ಹಾಗಾಗಿ ಸದಾ ಸಾರ್ವಜನಿಕರ ಸಂಪರ್ಕದಲ್ಲೇ ಇರುವ ರಾಜ್ಯದ ಪತ್ರಕರ್ತರಿಗೂ ಆರೋಗ್ಯ ತಪಾಸಣೆ ನಡೆಸುವ ಅಗತ್ಯವಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್ ಅವರು ಬರೆದ ಪತ್ರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರಿಗಣಿಸಿದ್ದಾರೆ.

ಕೂಡಲೇ ಆರೋಗ್ಯ ತಪಾಸಣಾ ಶಿಬಿರ ನಡೆಸುವಂತೆ ವಾರ್ತಾ ಇಲಾಖೆ ಆಯುಕ್ತರಿಗೆ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ABOUT THE AUTHOR

...view details