ಬೆಂಗಳೂರು: ಕೋವಿಡ್ ಸೋಂಕು ಪ್ರಕರಣಗಳ ನಿಯಂತ್ರಣಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ನಿರ್ದೇಶನದ ಮೇರೆಗೆ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಂಪು ಗುಂಪಾಗಿ ಕೋವಿಡ್ 19 ಪ್ರಕರಣಗಳು ವರದಿಯಾಗುತ್ತಿದ್ದು, ಎರಡನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕಡ್ಡಾಯವಾಗಿ ನಿಯಮ ಪಾಲಿಸಲು ಸೂಚಿಸಿದೆ.
ಅಂತಾರಾಜ್ಯ ಪ್ರಯಾಣ, ಟೆಸ್ಟ್ ಪಾಸಿಟಿವಿಟಿ ಪ್ರಮಾಣ ಹಾಗೂ ಸೋಂಕು ಹರಡುವ ಅಪಾಯವನ್ನು ತಗ್ಗಿಸುವ ನಿಟ್ಟನಲ್ಲಿ ಕೆಲವು ಜಿಲ್ಲೆಗಳಲ್ಲಿ ದೈನಂದಿನ ಪರೀಕ್ಷಾ ಪ್ರಮಾಣವನ್ನು ಕೂಡಾ ಪರಿಷ್ಕರಣೆ ಮಾಡಲಾಗಿದೆ.
ಸೋಂಕು ಪತ್ತೆ ಪರೀಕ್ಷಾ ಪ್ರಮಾಣ ಕೆಲವು ಜಿಲ್ಲೆಗಳಲ್ಲಿ ಪರಿಷ್ಕರಿಸಲಾಗಿದೆ ಅವುಗಳೆಂದರೆ..
- ಬೆಳಗಾವಿ-3 ಸಾವಿರ
- ಬೆಂಗಳೂರು ನಗರ - 40 ಸಾವಿರ
- ದಕ್ಷಿಣ ಕನ್ನಡ- 3 ಸಾವಿರ
- ಮೈಸೂರು- 5 ಸಾವಿರ
- ಕೊಡಗು- 1 ಸಾವಿರ
- ಉಡುಪಿ- 2 ಸಾವಿರ
- ತುಮಕೂರು-3,500
- ವಿಜಯಪುರ- 2 ಸಾವಿರ
ಈ ಜಿಲ್ಲೆಗಳಲ್ಲಿ ಮಾತ್ರ ಸೋಂಕು ಪತ್ತೆ ಪರೀಕ್ಷಾ ಪ್ರಮಾಣವನ್ನು ಪರಿಷ್ಕರಿಸಲಾಗಿದ್ದು, ಉಳಿದ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯಲಿದೆ. ಇದರ ಜೊತೆಗೆ ಬಳ್ಳಾರಿ, ಮೈಸೂರು, ದಾವಣಗೆರೆ, ಚಿಕ್ಕಮಗಳೂರು, ಬಾಗಲಕೋಟೆ, ಬೆಳಗಾವಿ, ವಿಜಯಪುರ, ದಕ್ಷಿಣ ಕನ್ನಡ, ತುಮಕೂರು, ಬೀದರ್, ಉಡುಪಿ, ಕಲಬುರಗಿ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ದೈನಂದಿನ ಪರೀಕ್ಷಾ ಗುರಿಯನ್ನು ತಲುಪಲು ಪೂರ್ಣ ಪ್ರಮಾಣದಲ್ಲಿ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.
ನಿಗದಿತ ಗುರಿಯಂತೆ, ದಾವಣಗೆರೆ, ಬಳ್ಳಾರಿ, ಮೈಸೂರು, ಬೆಳಗಾವಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರ್ಟಿ-ಪಿಸಿಆರ್ ಪರೀಕ್ಷಾ ಪ್ರಮಾಣವನ್ನು ಹೆಚ್ಚಿಸುವುದು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆರ್ಟಿ-ಪಿಸಿಆರ್ ಪರೀಕ್ಷೆಗಳನ್ನು ಗಣನೀಯವಾಗಿ ಹೆಚ್ಚಿಸಿ, ಆ್ಯಂಟಿಜೆನ್ ಪರೀಕ್ಷೆಗಳನ್ನು ಕಡಿಮೆಗೊಳಿಸುವಂತೆ ಸೂಚಿಸಲಾಗಿದೆ.
ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚುವ ಕಾರ್ಯವನ್ನು ದಕ್ಷಿಣ ಕನ್ನಡ, ಬೀದರ್, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಚುರುಕುಗೊಳಿಸಬೇಕು. ಸಂಪರ್ಕಿತರನ್ನು ಪತ್ತೆ ಹಚ್ಚುವ ಪ್ರಕ್ರಿಯೆಯು 1:20 ಪ್ರಮಾಣದಲ್ಲಿರಬೇಕು ಅಂತ ತಿಳಿಸಲಾಗಿದೆ.
ಸಭೆ-ಸಮಾರಂಭಗಳು, ಆಚರಣೆಗಳಿಗೂ ಹೊಸ ಗೈಡ್ ಲೈನ್ಸ್