ಬೆಂಗಳೂರು: ರಾಜ್ಯದಲ್ಲಿ ಬಹುಕಾಲದ ನಂತರ ಕೋವಿಡ್ ಮರಣ ಪ್ರಮಾಣ ಗಣನೀಯ ಇಳಿಕೆ ಕಂಡಿದ್ದು, ರಾಜ್ಯದ ಜನರು ನಿರಾಳರಾಗುವಂತೆ ಮಾಡಿದೆ.
ಸೋಂಕಿತರು, ಸಾವಿನ ಸಂಖ್ಯೆಯಲ್ಲಿ ಇಳಿಮುಖ:
ಬೆಂಗಳೂರು: ರಾಜ್ಯದಲ್ಲಿ ಬಹುಕಾಲದ ನಂತರ ಕೋವಿಡ್ ಮರಣ ಪ್ರಮಾಣ ಗಣನೀಯ ಇಳಿಕೆ ಕಂಡಿದ್ದು, ರಾಜ್ಯದ ಜನರು ನಿರಾಳರಾಗುವಂತೆ ಮಾಡಿದೆ.
ಸೋಂಕಿತರು, ಸಾವಿನ ಸಂಖ್ಯೆಯಲ್ಲಿ ಇಳಿಮುಖ:
ರಾಜ್ಯದಲ್ಲಿ ಸಾವಿನ ಸಂಖ್ಯೆ ಕಳೆದೊಂದು ವಾರದಿಂದ ಇಳಿಕೆ ಕಂಡಿದ್ದು, ಇಂದು 68 ಜನ ಕೊರೊನಾಗೆ ಬಲಿಯಾಗಿದ್ದಾರೆ. ನಿತ್ಯ ಸಾವಿನ ಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿರುತ್ತಿದ್ದ ಬೆಂಗಳೂರು ನಗರದಲ್ಲಿಂದು 5 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಸೋಂಕಿಗೆ ರಾಜ್ಯದಲ್ಲಿ ಇಲ್ಲಿಯವರೆಗೆ 4,683 ಸಾವಿಗೀಡಾಗಿದ್ದಾರೆ.
ಸೋಂಕಿತರ ಸಂಖ್ಯೆಯಲ್ಲೂ ಇಳಿಕೆಯಾಗಿದ್ದು, ಇಂದು 5,938 ಜನರಿಗೆ ಸೋಂಕು ದೃಢಪಟ್ಟಿದೆ. 4,996 ಮಂದಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ಸೋಂಕಿತರ ಸಂಖ್ಯೆ 2,77,814ಕ್ಕೆ ಹಾಗೂ ಬಿಡುಗಡೆಯಾದವರ ಸಂಖ್ಯೆ 1,89,564ಕ್ಕೆ ಏರಿಕೆಯಾಗಿದೆ. 787 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 4,05,508 ಮಂದಿ ಹೋಂ ಕ್ವಾರಂಟೈನ್ ಇದ್ದಾರೆ.
ಬೆಂಗಳೂರಿನಲ್ಲಿಂದು 2,126 ಹೊಸ ಸೋಂಕಿತರು ಪತ್ತೆಯಾಗಿದ್ದು, 5 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ನಗರದಲ್ಲಿನ ಸಾವಿನ ಸಂಖ್ಯೆ 1,668ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನ 1,468 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೆ 1,07,875 ಮಂದಿ ಸೋಂಕಿಗೆ ತುತ್ತಾಗಿದ್ದು 71,329 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.