ಬೆಂಗಳೂರು: ಕೊರೊನಾ ಸೋಂಕು ತಡೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸಭೆ, ಸಮಾರಂಭ, ಜಾತ್ರೆಗಳನ್ನು ರದ್ದುಪಡಿಸಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯ ಪ್ರವಾಸವನ್ನು ಮೊಟಕುಗೊಳಿಸಿದ್ದಾರೆ.
ಕೊರೊನಾ ಎಫೆಕ್ಟ್, ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯ ಪ್ರವಾಸ ರದ್ದು - ಭಾನುವಾರ ಮತ್ತು ಸೋಮವಾರದಂದು ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಪ್ರವಾಸ
ಕೊರೊನಾ ಸೋಂಕು ತಡೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸಭೆ, ಸಮಾರಂಭ, ಜಾತ್ರೆಗಳನ್ನು ರದ್ದುಪಡಿಸಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯ ಪ್ರವಾಸವನ್ನು ರದ್ದು ಪಡಿಸಿದ್ದಾರೆ.
ಕೊರೊನಾ ಎಫೆಕ್ಟ್, ಸಿಎಂ ರಾಜ್ಯ ಪ್ರವಾಸ ರದ್ದು...!
ಬಜೆಟ್ ಅಧಿವೇಶನದ ನಡುವೆ ಮಾರ್ಚ್ 15 ಮತ್ತು 16ರ ಭಾನುವಾರ ಮತ್ತು ಸೋಮವಾರದಂದು ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಪ್ರವಾಸ ನಿಗದಿಯಾಗಿತ್ತು. ಆದರೆ ಜನ ಸೇರುವ ಕಾರ್ಯಕ್ರಮ ಮಾಡದಂತೆ ಸರ್ಕಾರವೇ ಆದೇಶ ಹೊರಡಿಸಿದ ಕಾರಣ ಸಿಎಂ ತಮ್ಮ ಕಾರ್ಯಕ್ರಮಗಳನ್ನು ಹಾಗೂ ಪ್ರವಾಸವನ್ನು ರದ್ದುಪಡಿಸಿದ್ದಾರೆ.