ಕರ್ನಾಟಕ

karnataka

ETV Bharat / city

ಕೋವಿಡ್ ವೇಳೆ ಸೇವೆ ಸಲ್ಲಿಸಿದ ಆರೋಗ್ಯ ಇಲಾಖೆ ಸಿಬ್ಬಂದಿಗೆ ಇನ್ನೂ ಸಿಕ್ಕಿಲ್ಲ ವಿಶೇಷ ಭತ್ಯೆ! - ಆರೋಗ್ಯ ಇಲಾಖೆಯ ಸಿಬ್ಬಂದಿಗೆ ವಿಶೇಷ ಭತ್ಯೆ

ಜೀವದ ಹಂಗು ತೊರೆದು ಮಹಾಮಾರಿ ಕೊರೊನಾ ವಿರುದ್ಧ ಹೋರಾಡಿದ ಆರೋಗ್ಯ ಇಲಾಖೆ ಸಿಬ್ಬಂದಿಗೆ ಶೀಘ್ರದಲ್ಲಿ ವಿಶೇಷ ಭತ್ಯೆ ಕೊಡಬೇಕು ಎಂದ ನೌಕರರ ಸಂಘ ಒತ್ತಾಯಿಸಿದೆ.

ಆರೋಗ್ಯ ಇಲಾಖೆ ಸಿಬ್ಬಂದಿ
ಆರೋಗ್ಯ ಇಲಾಖೆ ಸಿಬ್ಬಂದಿ

By

Published : Oct 5, 2021, 5:24 AM IST

ಬೆಂಗಳೂರು:ಕೋವಿಡ್-19 ವಿರುದ್ಧ ಹಗಲಿರುಳು ಎನ್ನದೇ ಜೀವದ ಹಂಗು ತೊರೆದು ಹೋರಾಡಿದ್ದೇವೆ. ಇಂತಹ ಸೇವೆ ಸಲ್ಲಿಸಿದ ಆರೋಗ್ಯ ಇಲಾಖೆಯ ನೌಕರರಿಗೆ ವಿಶೇಷ ಭತ್ಯೆ ನೀಡುವುದಾಗಿ ಸರ್ಕಾರ ಈ ಹಿಂದೆ ಘೋಷಣೆ ಮಾಡಿದೆ. ಆದರೆ ಅದನ್ನು ಶೀಘ್ರ ಅನುಷ್ಥಾನಗೊಳಿಸುವಂತೆ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಇಲಾಖೆಯ ನೌಕರರ ಸಂಘ ಆಗ್ರಹಿಸಿದೆ.

ಇಂದು ಪ್ರೆಸ್ ಕ್ಲಬ್​ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಂಘದ ಅಧ್ಯಕ್ಷ ಶ್ರೀನಿವಾಸ್, ಬಹುದಿನಗಳ ಬೇಡಿಕೆಯಾದ ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಡಿಯಲ್ಲಿ ವಿಲೀನಗೊಳಿಸುವಂತೆ ಒತ್ತಾಯಿಸಿದ್ದಾರೆ.‌

ಕೋವಿಡ್-19 ವಿರುದ್ದ ಹೋರಾಡಿದ ಅತ್ಯುತ್ತಮ ರಾಜ್ಯವಾಗಿ ಕರ್ನಾಟಕಕ್ಕೆ ಪ್ರಶಸ್ತಿ ಲಭಿಸಿದ್ದು, ಸಂತಸದ ವಿಷಯವಾಗಿದೆ. ಕಳೆದ ಒಂದೂವರೆ ವರ್ಷದಿಂದ ಕೋವಿಡ್ ವಿರುದ್ದವಾಗಿ ನಡೆಯುತ್ತಿರುವ ಹೋರಾಟದಲ್ಲಿ ಆರೋಗ್ಯ ಸೇವೆಗಳನ್ನು ನೀಡುವಲ್ಲಿ ಗಣನೀಯ ಪಾತ್ರ ವಹಿಸಿದ ಆರೋಗ್ಯ ಇಲಾಖೆಯ ವೈದ್ಯಕೀಯ ಮತ್ತು ಅರೆವೈದ್ಯಕೀಯ ಸಿಬ್ಬಂದಿಗೆ ಈ ಗೌರವವನ್ನು ಸಮರ್ಪಿಸಿರುವುದು ಅತ್ಯಂತ ಸಂತೋಷದಾಯಕವಾಗಿದೆ. ಆದರೆ ಕೋವಿಡ್ ವಿರುದ್ದದ ಹೋರಾಟದಲ್ಲಿ ಹಗಲಿರುಳು ಜೀವದ ಹಂಗನ್ನು ತೊರೆದವರಿಗೆ ವಿಶೇಷ ಭತ್ಯೆ ಕೊಡಿ ಅಂತ ಮನವಿ ಮಾಡಿದರು.

ABOUT THE AUTHOR

...view details