ಬೆಂಗಳೂರು:ಕಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯಲ್ಲಿ ಕೊರೊನಾ ಸೋಂಕು ಪತ್ತೆ ಆಗುತ್ತಿದ್ದಂತೆ ಆತನನ್ನ ಕ್ವಾರಂಟೈನ್ಗೆ ಒಳಪಡಿಸಲಾಗಿದ್ದು, ಸದಾಶಿವನಗರ ಠಾಣೆಯನ್ನು ಸ್ಯಾನಿಟೈಸ್ ಮಾಡಿ, 48 ಗಂಟೆಗಳ ಕಾಲ ಸೀಲ್ಡೌನ್ ಮಾಡಲಾಗಿದೆ.
ಕಳ್ಳನಿಗೆ ಕೊರೊನಾ ಸೋಂಕು: 48 ಗಂಟೆ ಸದಾಶಿವನಗರ ಪೊಲೀಸ್ ಠಾಣೆ ಸೀಲ್ಡೌನ್!
ಕಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿದ್ದಂತೆ ಆತನನ್ನ ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಸೋಂಕತನ ಪ್ರಾಥಮಿಕ ಸಂಪರ್ಕದಲ್ಲಿದ್ದ ಸದಾಶಿವನಗರ ಠಾಣೆಯ ಇನ್ಸ್ಸ್ಪೆಕ್ಟರ್ ಸೇರಿ ಹತ್ತು ಸಿಬ್ಬಂದಿಯನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ.
ಈತನ ಪ್ರಾಥಮಿಕ ಸಂಪರ್ಕದಲ್ಲಿದ್ದ ಸದಾಶಿವನಗರದ ಇನ್ಸ್ಸ್ಪೆಕ್ಟರ್ ಸೇರಿದಂತೆ ಹತ್ತು ಸಿಬ್ಬಂದಿಯನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಅಪರಾಧ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ, ಕೆಲ ದಿನಗಳ ಹಿಂದೆ ದೊಡ್ಡಬೊಮ್ಮಸಂದ್ರದಲ್ಲಿ ಬಂಧಿಸಲಾಗಿತ್ತು. ಬಂಧನದ ಬಳಿಕ ಆರೋಪಿಯ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಿದ್ದು, ಈಗ ಬಂದ ವರದಿಯಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದೆ.
ನಗರ ಟ್ರಾಫಿಕ್ ಜಂಕ್ಷನ್ನಲ್ಲಿ ಕೆಲಸ ಮಾಡುತ್ತಿದ್ದ ಐವರು ಟ್ರಾಫಿಕ್ ಪೊಲೀಸರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಉಪ್ಪಾರಪೇಟೆ ಮತ್ತು ಕಾಮಾಕ್ಷಿಪಾಳ್ಯ ಟ್ರಾಫಿಕ್ ಠಾಣೆಯ ತಲಾ ಇಬ್ಬರು ಮತ್ತು ಕೆಎಸ್ ಲೇಔಟ್ ಟ್ರಾಫಿಕ್ ಠಾಣೆಯ ಓರ್ವ ಕಾನ್ಸ್ಟೆಬಲ್ಗೆ ಸೋಂಕು ದೃಢಪಟ್ಟಿದೆ.