ಬೆಂಗಳೂರು:ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆಯುವ ಚುನಾವಣೆಗೆ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ, ರಾಜ್ಯ ಕಾರ್ಯದರ್ಶಿ ಕೇಶವ ಪ್ರಸಾದ್, ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಮತ್ತು ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಸಿ.ಮಂಜುಳಾ ಬಿಜೆಪಿ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು, ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಬೇಕು. ಆದರೆ ಇನ್ನೂ ಕೂಡಾ ಅಧಿಕೃತವಾಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಲ್ಲ. ನೇರವಾಗಿ ಅಭ್ಯರ್ಥಿಗಳಿಗೆ ಕರೆ ಮಾಡಿ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಬಿಜೆಪಿ ಹೈಕಮಾಂಡ್ ಸೂಚಿಸಿದೆ. ವರಿಷ್ಠರ ಸೂಚನೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಕೆಗೆ ಸಂಭಾವ್ಯ ಅಭ್ಯರ್ಥಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.