ಕರ್ನಾಟಕ

karnataka

ETV Bharat / city

ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವಂತೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆಗ್ರಹ - ಉನ್ನತ ಶಿಕ್ಷಣ ಇಲಾಖೆ

ಒಂದು ನಿಗದಿತ ಅವಧಿಗೆ ಸೀಮಿತಗೊಳಿಸಿದಂತೆ ಅತಿಥಿ ಉಪನ್ಯಾಸಕರ ಸೇವೆಯನ್ನು ಖಾಯಂಗೊಳಿಸಿದ ನಂತರ, ಉಳಿದ ಹುದ್ದೆಗಳನ್ನು ನೇರ ನೇಮಕಾತಿ ಮಾಡಬಹುದು ಎಂದು ಬಸವರಾಜ ಹೊರಟ್ಟಿ ಉನ್ನತ ಶಿಕ್ಷಣ ಸಚಿವರಿಗೆ ಸಲಹೆ ನೀಡಿದ್ದಾರೆ.

council member basavaraja horatti letter to dcm on guest lectures
ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವಂತೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆಗ್ರಹ

By

Published : Jul 2, 2021, 12:01 AM IST

ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಳೆದ 15ರಿಂದ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆಗ್ರಹಿಸಿದ್ದಾರೆ.

ಈ ಸಂಬಂಧ ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದ ಕೊನೆಯ ಅವಧಿಯವರೆಗೆ ಸೇವೆಯನ್ನು ಪರಿಗಣಿಸಿ, ಅತಿಥಿ ಉಪನ್ಯಾಸಕ ಸೇವೆಯನ್ನು ಖಾಯಂಗೊಳಿಸುವಂತೆ ಈಗಾಗಲೇ ಕೋರಲಾಗಿತ್ತು. ಆದರೆ, ಈಗ ಉನ್ನತ ಶಿಕ್ಷಣ ಇಲಾಖೆ ಉಪನ್ಯಾಸಕರ ನೇರ ನೇಮಕ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿರುವುದಾಗಿ ತಿಳಿದು ಬಂದಿದೆ ಎಂದಿದ್ದಾರೆ.

ಕಳೆದ 15-20 ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರಲ್ಲಿ ಬಹುತೇಕರು ವಯೋಮಿತಿ ಮೀರುತ್ತಿದ್ದಾರೆ. ಬೋಧನಾ ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಹೊಂದಿರುವ ಇವರು ಅತ್ಯಂತ ಕಡಿಮೆ ವೇತನ ಪಡೆಯುತ್ತಿರುವುದರಿಂದ, ಜೀವನ ನಿರ್ವಹಣೆ ಕಷ್ಠಸಾಧ್ಯವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ವೈದ್ಯರು ತಮ್ಮ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ ನೀಡಿದ ಮನೋವೈದ್ಯ

ಈ ಅತಿಥಿ ಉಪನ್ಯಾಸಕರುಗಳು ಹೊಸಬರಿಗಿಂತ ಹಾಗೂ ಹೆಚ್ಚು ಉತ್ತಮವಾದ ಪಾಠ ಮಾಡುವುದರಲ್ಲಿ ಸಂಶಯವಿಲ್ಲ. ಈ ಹಿನ್ನೆಲೆಯಲ್ಲಿ, ಒಂದು ನಿಗದಿತ ಅವಧಿಗೆ ಸೀಮಿತಗೊಳಿಸಿದಂತೆ ಅವರ ಸೇವೆಯನ್ನು ಖಾಯಂಗೊಳಿಸಿದ ನಂತರ, ಉಳಿದ ಹುದ್ದೆಗಳನ್ನು ನೇರ ನೇಮಕಾತಿ ಮಾಡಬಹುದು ಎಂದು ಬಸವರಾಜ ಹೊರಟ್ಟಿ ಉನ್ನತ ಶಿಕ್ಷಣ ಸಚಿವರಿಗೆ ಸಲಹೆ ನೀಡಿದ್ದಾರೆ.

ABOUT THE AUTHOR

...view details