ಬೆಂಗಳೂರು:ಕೇಂದ್ರ ಸರ್ಕಾರ ಪ್ರಕಟಿಸಿರುವ ಅನ್ಲಾಕ್ 6 ಮಾರ್ಗಸೂಚಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಡಿಸೆಂಬರ್ 1ರಿಂದ ಜಾರಿಗೆ ಬರಲಿರುವ ಹೊಸ ಮಾರ್ಗಸೂಚಿ ಡಿಸೆಂಬರ್ 31 ರವರೆಗೆ ಜಾರಿಯಲ್ಲಿರಲಿದೆ. ಮಾರ್ಗಸೂಚಿಯಲ್ಲಿ ಕೊರೊನಾ ಹಿನ್ನೆಲೆ ಮುಖ್ಯವಾಗಿ ಕಣ್ಗಾವಲು, ನಿಯಂತ್ರಣ ಮತ್ತು ಕಟ್ಟುನಿಟ್ಟಾದ ಪಾಲನೆಯನ್ನು ಒಳಗೊಂಡ ಕಾರ್ಯತಂತ್ರವನ್ನು ಅಳವಡಿಸಿಕೊಳ್ಳಲು ಸೂಚಿಸಲಾಗಿದೆ. ಕಂಟೇನ್ಮೆಂಟ್ ವಲಯದಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುವುದು, ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಕೋವಿಡ್-19 ಹರಡುವುದನ್ನು ನಿಯಂತ್ರಿಸಲು ರಾತ್ರಿ ಕರ್ಫ್ಯೂನಂತಹ ಸ್ಥಳೀಯ ನಿರ್ಬಂಧಗಳನ್ನು ವಿಧಿಸಬಹುದು. ಆದರೆ, ಕಂಟೇನ್‌ಮೆಂಟ್ ವಲಯಗಳ ಹೊರಗೆ ಯಾವುದೇ ಲಾಕ್‌ಡೌನ್ ವಿಧಿಸಲು ರಾಜ್ಯ ಸರ್ಕಾರದ ಅನುಮತಿ ಅತ್ಯಗತ್ಯ ಎಂದು ತಿಳಿಸಲಾಗಿದೆ.
ಯಾವ್ಯಾವುದಕ್ಕೆ ನಿರ್ಬಂಧಿತ ಅನುಮತಿ?: