ಕರ್ನಾಟಕ

karnataka

ETV Bharat / city

Covid 3ನೇ ಅಲೆ.. ಪರಿಸ್ಥಿತಿ ಎದುರಿಸಲು ಸಿದ್ಧರಾಗಿ: ಬಿಡಿಎ ಅಧ್ಯಕ್ಷ ವಿಶ್ವನಾಥ್ ಸೂಚನೆ

ಕೋವಿಡ್ 3ನೇ ಅಲೆಯಿಂದ ಎದುರಾಗಬಹುದಾದ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಬಿಡಿಎ ಅಧ್ಯಕ್ಷ ವಿಶ್ವನಾಥ್ ಸೂಚನೆ ನೀಡಿದ್ದಾರೆ.

BDA president Viswanath notice to officers
ಪೂರ್ವ ಸಿದ್ಧತಾ ಸಭೆ

By

Published : Aug 2, 2021, 9:13 PM IST

ಬೆಂಗಳೂರು:ಕೋವಿಡ್ 3ನೇ ಅಲೆ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಎದುರಾಗಬಹುದಾದ ಪರಿಸ್ಥಿತಿಗಳನ್ನು ಸಮರ್ಥವಾಗಿ ಎದುರಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಬಿಡಿಎ ಅಧ್ಯಕ್ಷ ಹಾಗೂ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ತಮ್ಮ ಕ್ಷೇತ್ರದ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪೂರ್ವ ಸಿದ್ಧತಾ ಸಭೆ

ಸೋಮವಾರ ಯಲಹಂಕದ ಮಿನಿ ವಿಧಾನಸೌಧದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲೆಡೆ ಕೋವಿಡ್ ಆತಂಕ ಸೃಷ್ಟಿಯಾಗುತ್ತಿದೆ. ನಮ್ಮ ಕ್ಷೇತ್ರದಲ್ಲಿ ಮೊದಲ ಮತ್ತು ಎರಡನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಿದ್ದರ ಪರಿಣಾಮ ಸಾವು ನೋವಿನ ಪ್ರಮಾಣ ತಗ್ಗಿತ್ತು.

ತಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡಿರುವ ಕುಟುಂಬಗಳ ದುಃಖದಲ್ಲಿ ನಾವೂ ಭಾಗಿಯಾಗಿದ್ದೇವೆ. ಈ ಬಾರಿ ಎಂತಹದ್ದೇ ಸಂಕಷ್ಟ ಎದುರಾದರೂ ಅದನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಈಗಿನಿಂದಲೇ ಎಲ್ಲಾ ಅಗತ್ಯ ಪೂರ್ವ ಸಿದ್ಧತಾ ಕ್ರಮಗಳನ್ನು ರೂಪಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೋವಿಡ್​ ಸಂಕಷ್ಟ ಇನ್ನೂ ಮುಗಿದಿಲ್ಲ:

ಕೋವಿಡ್-19 ಸಂಕಟ ಇನ್ನೂ ಅಂತ್ಯಗೊಂಡಿಲ್ಲ. ಜನರು ಈ ಬಗ್ಗೆ ಅತ್ಯಂತ ಹೆಚ್ಚು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಪಾರ್ಟಿ ಮಾಡುವುದು, ಅಗತ್ಯಕ್ಕಿಂತ ಹೆಚ್ಚು ಜನರು ಸಭೆ ಸಮಾರಂಭಗಳಲ್ಲಿ ಭಾಗಿಯಾಗುವುದು ಸೇರಿದಂತೆ ಅನಗತ್ಯವಾಗಿ ಗುಂಪು ಗುಂಪಾಗಿ ಸೇರುವುದರಿಂದ ಆರೋಗ್ಯದ ಮೇಲೆ ಗಂಭೀರ ಪ್ರಮಾಣದ ಪರಿಣಾಮ ಬೀರಲಿದೆ. ಈ ಹಿನ್ನೆಲೆ ಜನರು ತಾವೇ ಸ್ವಯಂ ನಿಯಂತ್ರಣ ಹಾಕಿಕೊಂಡು ಅನಗತ್ಯ ಓಡಾಟ ನಿಲ್ಲಿಸಬೇಕು ಎಂದು ಮನವಿ ಮಾಡಿದರು.

ಎಲ್ಲರೂ ಲಸಿಕೆ ಹಾಕಿಸಿಕೊಳ್ಳುವಂತೆ ಕರೆ

ಕ್ಷೇತ್ರದಾದ್ಯಂತ ಕೋವಿಡ್ ಲಸಿಕಾಕರಣ ನಡೆಯುತ್ತಿದ್ದು, ಎಲ್ಲರೂ ಲಸಿಕೆಯನ್ನು ಹಾಕಿಸಿಕೊಳ್ಳಬೇಕು ಮತ್ತು ಇತರರಿಗೂ ಲಸಿಕೆ ಹಾಕಿಸಿಕೊಳ್ಳುವಂತೆ ಮನವೊಲಿಸಬೇಕು ಎಂದು ಕರೆ ನೀಡಿದರು. ಸಾರ್ವಜನಿಕರಲ್ಲಿ ಆರೋಗ್ಯ ಮತ್ತು ಸಾಮಾಜಿಕ ಅಂತರವನ್ನು ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಂದೆ ಎದುರಾಗಬಹುದಾದ ಯಾವುದೇ ಆರೋಗ್ಯ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಕ್ರಮಗಳನ್ನು ಈಗಿನಿಂದಲೇ ಸಜ್ಜುಗೊಳಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಸಭೆಯಲ್ಲಿ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಬಿಬಿಎಂಪಿಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ABOUT THE AUTHOR

...view details