ಬೆಂಗಳೂರು: ರಾಜ್ಯದಲ್ಲಿಂದು 933 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. 14 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. 704 ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 12,780ಕ್ಕೆ ಏರಿದೆ.
ರಾಜ್ಯದಲ್ಲಿಂದು 933 ಹೊಸ ಕೋವಿಡ್ ಕೇಸ್ ಪತ್ತೆ, 14 ಸೋಂಕಿತರು ಸಾವು - ಕೋವಿಡ್ ಅಪ್ಡೇಟ್
ರಾಜ್ಯದಲ್ಲಿಂದು ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಇಂದು 933 ಹೊಸ ಕೇಸ್ಗಳು ಪತ್ತೆಯಾಗಿದ್ದು, 14 ಜನ ಸಾವನ್ನಪ್ಪಿದ್ದಾರೆ.
covid
ಈವರೆಗೆ ಒಟ್ಟು 29,25,397 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 29,76,000 ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಸಂಖ್ಯೆ 37,794 ತಲುಪಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಲ್ಲಿ 291 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದ್ದು, ಐದು ಮಂದಿ ಮೃತಪಟ್ಟಿದ್ದಾರೆ. ನಗರದಲ್ಲಿ 7,623 ಸಕ್ರಿಯ ಪ್ರಕರಣಗಳಿವೆ.