ಬೆಂಗಳೂರು: ಕೊರೊನಾ ಸಾಂಕ್ರಾಮಿಕ ಸೋಂಕು ರೂಪಾಂತರ ಪಡೆಯುತ್ತಿದ್ದು, ಇದೀಗ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರೂಪಾಂತರಿ ವೈರಸ್ ಉಪಟಳದಿಂದಾಗಿ ವಿದೇಶದಿಂದ ಬರುವವರು ನೆಗಟಿವ್ ರಿಪೋರ್ಟ್ ಇದ್ದರೂ ಮತ್ತೊಮ್ಮೆ ಕೋವಿಡ್ ಟೆಸ್ಟ್ ಮಾಡಿಸಲೇಬೇಕು.
ನೆಗೆಟಿವ್ ರಿಪೋರ್ಟ್ ಇದ್ದರೂ ಈ ದೇಶದಿಂದ ಬಂದವರಿಗೆ ಮತ್ತೊಮ್ಮೆ ಕೋವಿಡ್ ಟೆಸ್ಟ್ ಕಡ್ಡಾಯ - ಕೊರೊನಾ ವರದಿ
ವಿದೇಶಗಳಲ್ಲಿ ರೂಪಾಂತರಿ ವೈರಸ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಆರ್‌ಟಿಪಿಸಿಆರ್ ಪರೀಕ್ಷಾ ವರದಿಯನ್ನು ವಿಮಾನ ಏರುವಾಗಲೇ ಕಡ್ಡಾಯವಾಗಿ ಹೊಂದಿರಬೇಕೆಂದು ಸೂಚಿಸಲಾಗಿತ್ತು. ಸದ್ಯದ ಪರಿಸ್ಥಿತಿ ಹಾಗೂ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಶಿಫಾರಿಸಿನ ಮೇರೆಗೆ ಈ ನಿಯಮವನ್ನು ಪರಿಷ್ಕರಿಸಲಾಗಿದೆ.
ಹೌದು, ಲಂಡನ್, ಯುರೋಪ್ ಮತ್ತು ಮಧ್ಯ ಪೂರ್ವ ರಾಷ್ಟ್ರಗಳಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿಯೇ ಸ್ಯಾಂಪಲ್ಸ್ ಕೊಡಬೇಕಿದೆ. ಹಾಗೇ ಕೋವಿಡ್ ಆರ್‌ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿಯನ್ನು ಕಡ್ಡಾಯ ಮಾಡಿದ್ದ ನಿಯಮ ಸಡಿಲಿಸಿ, ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಆಖ್ತರ್ ಸುತ್ತೋಲೆ ಹೊರಡಿಸಿದ್ದಾರೆ.
ವಿದೇಶಗಳಲ್ಲಿ ರೂಪಾಂತರಿ ವೈರಸ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಆರ್‌ಟಿಪಿಸಿಆರ್ ಪರೀಕ್ಷಾ ವರದಿಯನ್ನು ವಿಮಾನ ಏರುವಾಗಲೇ ಕಡ್ಡಾಯವಾಗಿ ಹೊಂದಿರಬೇಕೆಂದು ಸೂಚಿಸಲಾಗಿತ್ತು. ಸದ್ಯದ ಪರಿಸ್ಥಿತಿ ಹಾಗೂ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಶಿಫಾರಿಸಿನ ಮೇರೆಗೆ ಈ ನಿಯಮವನ್ನು ಪರಿಷ್ಕರಿಸಲಾಗಿದೆ. ಲಂಡನ್, ಯುರೋಪ್ ಮತ್ತು ಮಧ್ಯ ಪೂರ್ವ ರಾಷ್ಟ್ರಗಳಿಂದ ಇಲ್ಲಿಗೆ ಬರುವವರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ರಾಜ್ಯದ ಇತರ ವಿಮಾನ ನಿಲ್ದಾಣದಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆಗೆ ಮಾದರಿ ನೀಡಿ, ತೆರಳಬೇಕು. ವರದಿಗಾಗಿ ಕಾಯುವ ಅಗತ್ಯತೆ ಇಲ್ಲ ಎಂದು ತಿಳಿಸಿದ್ದಾರೆ.
ಆದರೆ, ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್ನಿಂದ ಬರುವವರು ವಿಮಾನ ನಿಲ್ದಾಣದಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆಗೆ ಮಾದರಿ ನೀಡಿ, ವರದಿ ಬರುವವರೆಗೂ ಕಾಯಬೇಕು. ಸೋಂಕು ದೃಢಪಡದಿದ್ದವರು ನಂತರ ಅಲ್ಲಿಂದ ತೆರಳಬಹುದು ಎಂದು ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.