ಕರ್ನಾಟಕ

karnataka

ETV Bharat / city

ಕೋವಿಡ್ ಉಲ್ಬಣ: ಸರ್ಕಾರಿ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ರದ್ದು

ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಸರ್ಕಾರಿ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿಯಿಂದ ತಾತ್ಕಾಲಿಕವಾಗಿ ವಿನಾಯಿತಿ ನೀಡಲಾಗಿದೆ.

ಸರ್ಕಾರಿ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ರದ್ದು
ಸರ್ಕಾರಿ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ರದ್ದು

By

Published : Jan 11, 2022, 4:44 PM IST

ಬೆಂಗಳೂರು:ಕೋವಿಡ್ ಉಲ್ಬಣಿಸುತ್ತಿರುವ ಹಿನ್ನೆಲೆ ಸರ್ಕಾರಿ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿಯಿಂದ ತಾತ್ಕಾಲಿಕವಾಗಿ ವಿನಾಯಿತಿ ನೀಡಲಾಗಿದೆ.

ಈ ಸಂಬಂಧ ಆದೇಶ ಹೊರಡಿಸಿರುವ ಸರ್ಕಾರ, ರಾಜ್ಯದ ಹಲವಾರು ಕಡೆ ಕೊರೊನಾ ಮತ್ತು ವೈರಾಣು ಸಮಸ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವಾಲಯ ಹಾಗೂ ಇನ್ನಿತರ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ/ಸಿಬ್ಬಂದಿಯ ಆರೋಗ್ಯದ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಸರ್ಕಾರಿ ಅಧಿಕಾರಿ, ಸಿಬ್ಬಂದಿ ಬಯೋಮೆಟ್ರಿಕ್ ಹಾಜರಾತಿಯನ್ನು ನಮೂದಿಸುವುದಕ್ಕೆ ಮುಂದಿನ ಆದೇಶದವರೆಗೂ ವಿನಾಯಿತಿ ನೀಡಲಾಗಿದೆ. ಜೊತೆಗೆ ಹಾಜರಾತಿ ಪುಸ್ತಕದಲ್ಲಿ ಹಾಜರಾತಿಯನ್ನು ನಿರ್ವಹಿಸುವಂತೆ ಮತ್ತು ಆಯಾ ಇಲಾಖೆಯ ನೋಡಲ್ ಅಧಿಕಾರಿಗಳು ಈ ಕುರಿತು ಸಿಬ್ಬಂದಿ ಹಾಜರಾತಿಯನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ.

ಕೋವಿಡ್ ಹೆಚ್ಚಳ ಹಿನ್ನೆಲೆ ಸರ್ಕಾರ ಈಗಾಗಲೇ ನೈಟ್, ವೀಕೆಂಡ್ ಕರ್ಫ್ಯೂ ಸೇರಿದಂತೆ ಕಠಿಣ ಕ್ರಮಕಗಳನ್ನು ಜಾರಿಗೊಳಿಸಿದೆ.

(ಇದನ್ನೂ ಓದಿ: ವಿವೋ ಐಪಿಎಲ್ ಅಲ್ಲ, ಮುಂದಿನ ವರ್ಷ ಟಾಟಾ ಐಪಿಎಲ್)

ABOUT THE AUTHOR

...view details