ಕರ್ನಾಟಕ

karnataka

ETV Bharat / city

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತೆಗೆ ವೈದ್ಯನಿಂದಲೇ ಲೈಂಗಿಕ ಕಿರುಕುಳ: ಆರೋಪ

ವಿಕ್ಟೋರಿಯಾ ಆಸ್ಪತ್ರೆ ವೈದ್ಯನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಕೋವಿಡ್ ಸೋಂಕಿತೆ ಆರೋಪಿಸಿ ವಿವಿ ಪುರಂ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

By

Published : Aug 3, 2020, 12:00 PM IST

molestation by doctor
ಕೋವಿಡ್ ಸೋಂಕಿತೆಗೆ ವೈದ್ಯನಿಂದಲೇ ಲೈಂಗಿಕ ಕಿರುಕುಳ

ಬೆಂಗಳೂರು:ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋವಿಡ್ ಸೋಂಕಿತೆಗೆ ವೈದ್ಯನೇ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.

ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್​ನಲ್ಲಿ ಸೋಂಕಿತ ಯುವತಿ ಚಿಕಿತ್ಸೆ ಪಡೆಯುತ್ತಿದ್ದು, ಜುಲೈ 25 ರಂದು ರಾತ್ರಿ 10 ಗಂಟೆ ಸುಮಾರಿಗೆ ಆಸ್ಪತ್ರೆಯ ವೈದ್ಯನೊಬ್ಬ ಲೈಂಗಿಕ ಕಿರುಕುಳ ‌ನೀಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. ತಕ್ಷಣ ಯುವತಿಯು ಟ್ರಾಮ ಕೇರ್ ಸೆಂಟರ್​​​ನ ನೋಡಲ್ ಅಧಿಕಾರಿ ವಿಕ್ಟೋರಿಯಾ ಆಸ್ಪತ್ರೆ ಮುಖ್ಯಸ್ಥ ಡಾ.ಬಾಲಜಿ ಪೈ ಅವರಿಗೆ ಮಾಹಿತಿ ನೀಡಿದ್ದಾರೆ.

ಘಟನೆ ಸಂಬಂಧ ಸಂತ್ರಸ್ತೆ ವಿವಿ ಪುರಂ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ವೈದ್ಯನ ವಿರುದ್ಧ ಸೆಕ್ಷನ್​ 354 (A) ಅಡಿ ಎಫ್ಐಆರ್ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ABOUT THE AUTHOR

...view details