ಕರ್ನಾಟಕ

karnataka

ETV Bharat / city

Covid Report: ರಾಜ್ಯದಲ್ಲಿಂದು 64 ಮಂದಿಗೆ ಕೊರೊನಾ‌

ಕೊರೊನಾ ನಾಲ್ಕನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಇಂದು ಸರ್ಕಾರ ಸಭೆ ನಡೆಸಿ, ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯಗೊಳಿಸಲು ತೀರ್ಮಾನಿಸಿದೆ.

Covid Report
Covid Report

By

Published : Apr 25, 2022, 7:43 PM IST

ಬೆಂಗಳೂರು:ರಾಜ್ಯದಲ್ಲಿಂದು 4,637 ಮಂದಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, 64 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,46,998ಕ್ಕೆ ಏರಿದೆ.‌ ಕೊರೊನಾ ಪಾಸಿಟಿವ್ ದರ ಶೇ.1.38 ಕ್ಕೆ ಏರಿಕೆ ಕಂಡಿದೆ. ಇತ್ತ 69 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 39,05,228 ಮಂದಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಇಲಾಖೆ ಬುಲೆಟಿನ್ ಬಿಡುಗಡೆ ಮಾಡಿದೆ.

ಇಂದು ಸೋಂಕಿನಿಂದ ಮೃತಪಟ್ಟ ಬಗ್ಗೆ ಯಾವುದೇ ವರದಿಯಾಗಿಲ್ಲ. ಸೋಂಕಿನಿಂದ ಈವರೆಗೆ 40,057 ಮೃತಪಟ್ಟಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳು 1671 ರಷ್ಟಿವೆ. ವಿಮಾನ ನಿಲ್ದಾಣದಿಂದ 3,192 ಪ್ರಯಾಣಿಕರು ತಪಾಸಣೆಗೆ ಒಳಪಟ್ಟಿದ್ದಾರೆ. ಇನ್ನು ಬೆಂಗಳೂರಿನಲ್ಲಿಂದು 63 ಮಂದಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 17,82,999 ಕ್ಕೆ ಏರಿಕೆ ಆಗಿದೆ. 59 ಮಂದಿ ಡಿಸ್ಚಾರ್ಜ್ ಆಗಿದ್ದು, ಈ ತನಕ 17,64,426 ಜನ ಗುಣಮುಖರಾಗಿದ್ದಾರೆ. ಬೆಂಗಳೂರಲ್ಲಿ ಈವರೆಗೆ 16,962 ಜನ ಮೃತಪಟ್ಟಿದ್ದಾರೆ. ಸದ್ಯ 1,610 ಸಕ್ರಿಯ ಪ್ರಕರಣಗಳಿವೆ.

ರೂಪಾಂತರಿ ವೈರಸ್ ಅಪ್​ಡೇಟ್ಸ್:
ಅಲ್ಪಾ - 156
ಬೇಟಾ - 08
ಡೆಲ್ಟಾ ಸಬ್ ಲೈನ್ ಏಜ್ - 4620
ಇತರೆ - 311
ಒಮಿಕ್ರಾನ್ - 3775
BAI.1.529 - 947
BA1 - 99
BA2 - 2729

ಈವರೆಗೆ ಒಟ್ಟು 8,890 ರೂಪಾಂತರಿ ವೈರಸ್​ಗಳು ಪತ್ತೆಯಾಗಿವೆ. ಇನ್ನು ನಾಲ್ಕನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಸರ್ಕಾರ ಮುನ್ನೆಚ್ಚರಿಕೆ ಕೈಗೊಂಡಿದ್ದು, ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯಗೊಳಿಸಿದೆ. ಜೊತೆಗೆ ಶೀಘ್ರದಲ್ಲಿ ಹೊಸ ಮಾರ್ಗಸೂಚಿ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಲಿದೆ.

(ಇದನ್ನೂ ಓದಿ: ಕೋವಿಡ್ 4ನೇ ಅಲೆ ಭೀತಿ: ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ.. ಸರ್ಕಾರದಿಂದ ಹೊಸ ಮಾರ್ಗಸೂಚಿ)

ABOUT THE AUTHOR

...view details