ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿದ್ದು, ಇತ್ತ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣಗಳು ಕೂಡ ಹೆಚ್ಚುತ್ತಿದೆ. ಈವರೆಗೆ ಬರೋಬ್ಬರಿ 3,78,300 ಮಂದಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳದಲ್ಲಿ ಓಡಾಡಿ ಆತಂಕ ಸೃಷ್ಟಿಸಿದ್ದಾರೆ.
ಆರೋಗ್ಯ ಇಲಾಖೆ ನಿಯಮದ ಪ್ರಕಾರ ಸೋಂಕಿತರ ಪ್ರಾಥಮಿಕ ಸಂಪರ್ಕಿತರು, ವಿದೇಶದಿಂದ ಹಾಗೂ ಇತರ ರಾಜ್ಯಗಳಿಂದ ಬಂದವರು 14 ದಿನಗಳ ಕಾಲ ಕ್ವಾರಂಟೈನ್ನಲ್ಲಿರಬೇಕು. ಆದರೆ, 3,78,300 ಜನರು ಈ ನಿಯಮ ಉಲ್ಲಂಘಿಸಿದ್ದು, ಈ ಪೈಕಿ ಸರಿಯಾದ ಸಾಕ್ಷ್ಯಾಧಾರದ ಮೇರೆಗೆ 1,998 ಮಂದಿ ಮೇಲೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿದೆ.