ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸಕ್ಕೆ 3 ದಿನಗಳು ಬಾಕಿ ಇರುವಂತೆ ಪೊಲೀಸ್ ಇಲಾಖೆಯ ಆದೇಶವೊಂದು ಗೊಂದಲಕ್ಕೆ ಎಡೆಮಾಡಿಕೊಟ್ಟಿದೆ. ಗಣ್ಯರು, ಸಿಬ್ಬಂದಿ ವರ್ಗ ಹಾಗೂ ಕಾರ್ಯಕ್ರಮದಲ್ಲಿ ಭಾಗಿಯಾಗುವ ಜನರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು ಎನ್ನುವ ಸುತ್ತೋಲೆ ಇದೀಗ ಎಲ್ಲರನ್ನೂ ಚಿಂತೆಗೀಡು ಮಾಡಿದೆ. ಮೈಸೂರು ಕಾರ್ಯಕ್ರಮಕ್ಕೆ ಇಲ್ಲದ ರೂಲ್ಸ್ ಬೆಂಗಳೂರಿನ ಕಾರ್ಯಕ್ರಮಕ್ಕೆ ಯಾಕೆ? ಎಂಬ ಪ್ರಶ್ನೆ ಮೂಡಿದೆ.
ಪ್ರಧಾನಿ ನರೇಂದ್ರ ಮೋದಿ ಜೂ.20 ಮತ್ತು 21 ರಂದು ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿ ಬೆಂಗಳೂರಿನ ಕಾರ್ಯಕ್ರಮಕ್ಕೆ ಒಂದು ರೂಲ್ಸ್, ಮೈಸೂರಿನ ಕಾರ್ಯಕ್ರಮಕ್ಕೆ ಮತ್ತೊಂದು ರೂಲ್ಸ್ ಮಾಡಿ ಅಧಿಕಾರಿಗಳು ಗೊಂದಲ ಸೃಷ್ಟಿಸಿದ್ದಾರೆ. ಬೆಂಗಳೂರಿನ ಪ್ರಧಾನಿ ಕಾರ್ಯಕ್ರಮಕ್ಕೆ ಕೋವಿಡ್ ಟೆಸ್ಟ್ ಕಡ್ಡಾಯ ಎಂಬ ರೂಲ್ಸ್ ಮಾಡಿದ್ದು, ಮೈಸೂರಿನ ಪ್ರಧಾನಿ ಕಾರ್ಯಕ್ರಮಕ್ಕೆ ಎರಡು ಡೋಸ್ ಸರ್ಟಿಫಿಕೇಟ್ ಸಾಕು ಎಂಬ ರೂಲ್ಸ್ ಮಾಡಲಾಗಿದೆ.