ಬೆಂಗಳೂರು:ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಮಸೂದೆಯನ್ನು ಇಂದು ರಾಜ್ಯಪಾಲರಿಗೆ ಕಳುಹಿಸಲು ಸರ್ಕಾರ ನಿರ್ಧರಿಸಿದೆ.
ಸೋಮವಾರ ನಡೆದ ಸಂಪುಟ ಸಭೆಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ನಿರ್ಧರಿಸಲಾಗಿದ್ದು, ರಾಜ್ಯಪಾಲರ ಅಂಕಿತಕ್ಕಾಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಮೂಲಕ ರಾಜ್ಯಪಾಲರಿಗೆ ಕಳುಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ.