ಬೆಂಗಳೂರು:ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಟಿ-20 ಕ್ರಿಕೆಟ್ ಪಂದ್ಯ ನಡೆಯಲಿದ್ದು, ಮುಂಜಾಗ್ರತ ಕ್ರಮವಾಗಿ ಪೊಲೀಸ್ ಬಿಗಿ ಭದ್ರತೆ ನೀಡಲಾಗಿದೆ.
ಭಾರತ-ದ. ಆಫ್ರಿಕಾ ಟಿ-20: ಚಿನ್ನಸ್ವಾಮಿ ಸ್ಟೇಡಿಯಂ ಸುತ್ತ ಪೊಲೀಸ್ ಸರ್ಪಗಾವಲು - cricket news
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಟಿ-20 ಪಂದ್ಯ ನಡೆಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ನಾಳೆ ಭಾರತ-ದಕ್ಷಿಣ ಆಫ್ರಿಕಾ ನಡುವೆ ಕ್ರಿಕೆಟ್ ಪಂದ್ಯ: ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಪೊಲೀಸ್ ಸರ್ಪಗಾವಲು
ಸ್ಟೇಡಿಯಂ ಸುತ್ತಮುತ್ತ 12 ಕಡೆಗಳಲ್ಲಿ ವಾಹನ ನಿಲುಗಡೆಯನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ರಾತ್ರಿ 11ರವರೆಗೂ ಮೈದಾನದ ಸುತ್ತಮುತ್ತ ಆಟೋ ಸಂಚಾರಕ್ಕೆ ನಿರ್ಬಂಧವಿದೆ. ಪಂದ್ಯ ವೀಕ್ಷಿಸಲು ಬರುವ ಕ್ರೀಡಾಭಿಮಾನಿಗಳು ವಾಹನಗಳನ್ನು ನಿಗದಿತ ಸ್ಥಳದಲ್ಲೇ ನಿಲ್ಲಿಸಬೇಕೆಂದು ಈಗಾಗಲೇ ಸೂಚಿಸಲಾಗಿದೆ ಎಂದು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿ ಕಾಂತೇಗೌಡ ತಿಳಿಸಿದ್ದಾರೆ.
ಪಂದ್ಯ ಮುಗಿಯುವುದು ತಡರಾತ್ರಿ ಆಗುವುದರಿಂದ ಸುರಕ್ಷಿತವಾಗಿ ಮನೆಗೆ ತೆರಳಲು ಬಿಎಂಟಿಸಿ ಹೆಚ್ಚುವರಿ ಬಸ್ ಸೌಲಭ್ಯ ಮಾಡಿದೆ.