ಬೆಂಗಳೂರು :ಭೀಕರ ಅಪಘಾತದಲ್ಲಿ ಸಿಆರ್ಪಿಎಫ್ ಸಬ್ ಇನ್ಸ್ಪೆಕ್ಟರ್ ಹಾಗೂ ಯೆಮೆನ್ ಪ್ರಜೆ ಸಾವನ್ನಪ್ಪಿರುವ ಘಟನೆ ಯಲಹಂಕ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಮಾರ್ಚ್ 30ರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ಸಿಆರ್ಪಿಎಫ್ ಸಬ್ ಇನ್ಸ್ಪೆಕ್ಟರ್ ಸ್ವಾಮಿಗೌಡ (54) ಹಾಗೂ ಯೆಮೆನ್ ಮೂಲದ ವಿದ್ಯಾರ್ಥಿ ಅಮ್ಮರ್ ಸುಲೇಹಾ (22) ಎಂದು ಗುರುತಿಸಲಾಗಿದೆ.
ಭೀಕರ ರಸ್ತೆ ಅಪಘಾತದಲ್ಲಿ ಸಿಆರ್ಪಿಎಫ್ ಸಬ್ ಇನ್ಸ್ಪೆಕ್ಟರ್ ಹಾಗೂ ವಿದೇಶಿ ವಿದ್ಯಾರ್ಥಿ ಸಾವು
ವಿದೇಶಿ ವಿದ್ಯಾರ್ಥಿ ಅಮ್ಮರ್ ಸುಲೇಹಾ ಅವರು ಅಜಾಗರೂಕತೆಯಿಂದ ಬೈಕ್ ಚಲಾಯಿಸಿಕೊಂಡು ಬಂದಿದ್ದು, ರಸ್ತೆ ದಾಟುತ್ತಿದ್ದ ಸಿಆರ್ಪಿಎಫ್ ಸಬ್ ಇನ್ಸ್ಪೆಕ್ಟರ್ ಅವರಿಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಇಬ್ಬರೂ ಸಾವನ್ನಪ್ಪಿದ್ದಾರೆ..
ಅಜಾಗರೂಕತೆಯಿಂದ ವೇಗವಾಗಿ ಬಂದ ಅಮ್ಮರ್ ಸುಲೇಹಾ ಬೈಕ್ ಬುಧವಾರ ರಾತ್ರಿ 11.30ರ ಸುಮಾರಿಗೆ ಕರ್ತವ್ಯ ಮುಗಿಸಿ ಯಲಹಂಕದ ಸಿಆರ್ಪಿಎಫ್ ಕ್ಯಾಂಪಸ್‌ನ ಪೂರ್ವ ದ್ವಾರದ ಬಳಿ ರಸ್ತೆ ದಾಟುತ್ತಿದ್ದ ಸ್ವಾಮಿಗೌಡ ಅವರಿಗೆ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರೂ ಸಹ ನೆಲಕ್ಕೆ ಬಿದ್ದು ಬೈಕ್ ಸಮೇತ ಸುಮಾರು 50 ಮೀಟರ್‌ಗಳಷ್ಟು ದೂರ ಹೋಗಿ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನೂ ಸ್ಥಳೀಯರ ನೆರವಿನಿಂದ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆಯಾದರೂ ಇಬ್ಬರೂ ಸಾವನ್ನಪ್ಪಿದ್ದಾರೆ.
ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅಜಾರೂಕತೆಯಿಂದ ಬೈಕ್ ಚಲಾಯಿಸಿದ ಅಮ್ಮರ್ ಸಲೇಹಾ ವಿರುದ್ಧ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.