ಕರ್ನಾಟಕ

karnataka

ETV Bharat / city

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಸಿಟಿ ರವಿ ವಿರುದ್ಧದ ಪ್ರಕರಣ ರದ್ದು - ಸಿಟಿ ರವಿ ವಿರುದ್ಧದ ಪ್ರಕರಣ

ಸಿ.ಟಿ ರವಿ ಹಾಗೂ ಬೆಂಬಲಿಗರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸುನೀಲ್ ದತ್ ಯಾದವ್ ಅವರಿದ್ದ ಪೀಠ ಈ ಆದೇಶ ಜಾರಿ ಮಾಡಿದೆ. ಪೀಠವು ತನ್ನ ಆದೇಶದಲ್ಲಿ, ಪ್ರಕರಣ ಸಂಬಂಧಿಸಿದಂತೆ ಚುನಾವಣಾಧಿಕಾರಿ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ದೂರು ದಾಖಲಿಸಬೇಕಿತ್ತು. ಆದರೆ, ನೇರವಾಗಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ದೂರು ದಾಖಲಿಸುವ ಪ್ರಕ್ರಿಯೆ ದೋಷಪೂರಿತವಾಗಿರುವ ಕಾರಣ ಅದು ವಿಚಾರಣೆಗೆ ಯೋಗ್ಯವಾಗಿಲ್ಲ ಎಂದು ತಿಳಿಸಿ ಅರ್ಜಿದಾರರ ವಿರುದ್ಧದ ಪ್ರಕರಣ ರದ್ದುಪಡಿಸಿದೆ.

ct-ravi-violation-of-the-electoral-code
ಸಿಟಿ ರವಿ

By

Published : Jun 7, 2021, 9:50 PM IST

ಬೆಂಗಳೂರು:ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಬಿಜೆಪಿ ಮುಖಂಡ ಸಿ.ಟಿ ರವಿ ಮತ್ತು ಮೂವರು ಬೆಂಬಲಿಗರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ಪ್ರಕರಣ ರದ್ದುಪಡಿಸುವಂತೆ ಕೋರಿ ಸಿ.ಟಿ ರವಿ ಹಾಗೂ ಬೆಂಬಲಿಗರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸುನೀಲ್ ದತ್ ಯಾದವ್ ಅವರಿದ್ದ ಪೀಠ ಈ ಆದೇಶ ಜಾರಿ ಮಾಡಿದೆ. ಪೀಠವು ತನ್ನ ಆದೇಶದಲ್ಲಿ, ಪ್ರಕರಣ ಸಂಬಂಧಿಸಿದಂತೆ ಚುನಾವಣಾಧಿಕಾರಿ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ದೂರು ದಾಖಲಿಸಬೇಕಿತ್ತು. ಆದರೆ, ನೇರವಾಗಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ದೂರು ದಾಖಲಿಸುವ ಪ್ರಕ್ರಿಯೆ ದೋಷಪೂರಿತವಾಗಿರುವ ಕಾರಣ ಅದು ವಿಚಾರಣೆಗೆ ಯೋಗ್ಯವಾಗಿಲ್ಲ ಎಂದು ತಿಳಿಸಿ ಅರ್ಜಿದಾರರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿದೆ.

ಇದೇ ವೇಳೆ ದೂರುದಾರರಾದ ಚುನಾವಣಾಧಿಕಾರಿಯು ಈ ಸಂಬಂಧ ಹೊಸದಾಗಿ ಕಾನೂನು ಪ್ರಕಾರ ದೂರು ದಾಖಲಿಸಲು ಕೂಡ ಸ್ವತಂತ್ರರಿದ್ದಾರೆ ಎಂದು ಪೀಠ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ: 2019ರ ಲೋಕಸಭೆ ಚುನಾವಣೆ ವೇಳೆ ಏ.7ರ ಮಧ್ಯಾಹ್ನ ಬಿಜೆಪಿ ಶಾಸಕ ಸಿ.ಟಿ ರವಿ ಮತ್ತವರ ಬೆಂಬಲಿಗರು ಸಕಲೇಶಪುರ ತಾಲೂಕಿನ ಬಾಗೆಹಳ್ಳಿಯಲ್ಲಿ ಸುಮಾರು 100 ಮಂದಿ ಕಾರ್ಯಕರ್ತರನ್ನು ಸೇರಿಸಿ ಸಭೆ ನಡೆಸಿದ್ದರು. ಪೂರ್ವಾನುಮತಿ ಪಡೆಯದೇ ಸಭೆ ನಡೆಸಿದ್ದು, ನೀತಿ ಸಂಹಿತೆಯ ಉಲ್ಲಂಘನೆ ಎಂದು ಆರೋಪಿಸಿ ಚನಾವಣಾಧಿಕಾರಿ ಸಕಲೇಶಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಈ ಪ್ರಕರಣ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು.

ABOUT THE AUTHOR

...view details