ಬೆಂಗಳೂರು: ನಗರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ಫೇಸ್ಬುಕ್ನಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿ ಕಿಡಿ ಹೊತ್ತಿಸಲು ಮುಂದಾಗಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಸೈಬರ್ ಪೊಲೀಸರು ಅಲರ್ಟ್ - ಬೆಂಗಳೂರು ಸುದ್ದಿ
ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ಫೇಸ್ಬುಕ್ನಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದು, ಈತನ ವಿರುದ್ಧ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.
ಸೈಬರ್ ಪೊಲೀಸರು ಅಲರ್ಟ್
ಈ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ಈತನ ಮೆಲೆ ಕ್ರಮಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಇನ್ನಷ್ಟು ಪೋಸ್ಟ್ಗಳನ್ನು ದುಷ್ಕರ್ಮಿಗಳು ಹಾಕುವ ಸಾಧ್ಯತೆ ಹಿನ್ನೆಲೆಯಲ್ಲಿ ಸೈಬರ್ ಪೊಲೀಸರು ಅಲರ್ಟ್ ಆಗಿದ್ದಾರೆ ಎಂದು ಹೇಳಲಾಗಿದೆ.
ಇಂತಹ ಪೋಸ್ಟ್ಗಳಿಂದಲೇ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆ ಇದ್ದು, ಪೊಲೀಸರು ಕುಡಾ ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ ಎನ್ನಲಾಗಿದೆ.