ಬೆಂಗಳೂರು:ನಾಗವಾರ ಬಳಿಯ ಮಸೀದಿಯೊಂದರ ಕಾಂಪ್ಲೆಕ್ಸ್ನಲ್ಲಿ ಇರುವ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಸಿಲಿಂಡರ್ ಸ್ಫೋಟವಾಗಿ, ಇಬ್ಬರು ಗಾಯಗೊಂಡಿದ್ದಾರೆ. ಸ್ಫೋಟದಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು.
ನಾಗವಾರ ಮುಖ್ಯರಸ್ತೆಯಲ್ಲಿರುವ ಉಮರ್ ಬಿನ್ ಕತಾಬ್ ಮಸೀದಿ ಕಾಂಪ್ಲೆಕ್ಸ್ನಲ್ಲಿ ಇರುವ ಗ್ಯಾಸ್ ಸ್ಟೌವ್ ಅಂಗಡಿಯಲ್ಲಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸ್ಫೋಟವಾಗಿದೆ. ಘಟನೆಯಲ್ಲಿ ಮಾಲೀಕ ಹಾಗೂ ಕೆಲಸದ ಸಿಬ್ಬಂದಿಗೆ ಸಣ್ಣ ಮಟ್ಟದ ಗಾಯವಾಗಿದೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ.