ಬೆಂಗಳೂರು:ನಗರದಲ್ಲಿ ಬೆಳ್ಳಂಬೆಳಗ್ಗೆ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ದಂಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೆಚ್ಎಎಲ್ ಬಳಿಯ ಅನಸಂದ್ರಪಾಳ್ಯದ ಬಳಿ ನಡೆದಿದೆ.
ಬೆಂಗಳೂರು: ಸಿಲಿಂಡರ್ ಸ್ಫೋಟಕ್ಕೆ ಅಲುಗಾಡಿದ ಎರಡಂತಸ್ತಿನ ಕಟ್ಟಡ, ದಂಪತಿಗೆ ಗಂಭೀರ ಗಾಯ - ಹೆಚ್ಎಎಲ್ ಪೊಲೀಸ್ ಠಾಣೆ
ಸಿಲಿಂಡರ್ ಸ್ಪೋಟಗೊಂಡು ದಂಪತಿ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರಿನ ಹೆಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಿಲಿಂಡರ್ ಸ್ಪೋಟ
ಮುಂಜಾನೆ ಅಡಿಗೆ ಮಾಡಲು ತೆರಳಿದ್ದಾಗ ಸಿಲಿಂಡರ್ ಸ್ಫೋಟಗೊಂಡಿದೆ. ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣ ಜಖಂಗೊಂಡಿವೆ. ಸಿಲಿಂಡರ್ ಸ್ಪೋಟಕ್ಕೆ ಎರಡು ಅಂತಸ್ತಿನ ಕಟ್ಟಡವೂ ಕೂಡ ಅಲುಗಾಡಿದೆ.
ಗಾಯಗೊಂಡ ದಂಪತಿಯನ್ನು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಸ್ಥಳಕ್ಕೆ ಹೆಚ್ಎಎಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ.
Last Updated : May 31, 2020, 11:17 AM IST