ಕರ್ನಾಟಕ

karnataka

ETV Bharat / city

ಪಿಎಸ್ಐ ನೇಮಕ ಅಕ್ರಮದಲ್ಲಿ ಭಾಗಿಯಾದ ಸಚಿವರು,ನಾಯಕರ ಹೆಸರು ಮುಚ್ಚಿಡುವುದೇಕೆ?: ಡಿ.ಕೆ. ಶಿವಕುಮಾರ್ - ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಪಕ್ಷಕ್ಕೆ ಏನೆಲ್ಲಾ ಕಾರ್ಯಕ್ರಮಗಳು ಅನುಕೂಲವಾಗುತ್ತವೋ ಅದಕ್ಕೆ ಪಕ್ಷದ ಅಧ್ಯಕ್ಷನಾಗಿ ನಾನು ಬೆಂಬಲವಾಗಿ ನಿಲ್ಲುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.

D K Shivakumar
ಡಿ.ಕೆ. ಶಿವಕುಮಾರ್

By

Published : Jul 6, 2022, 9:38 PM IST

Updated : Jul 6, 2022, 9:49 PM IST

ಬೆಂಗಳೂರು : ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಬಂಧನಕ್ಕೊಳಗಾಗಿರುವ ಎಡಿಜಿಪಿ ಅಮೃತ್ ಪಾಲ್ ಅವರು ಈ ಹಗರಣದಲ್ಲಿ ಭಾಗಿಯಾಗಿರುವ ಸಚಿವರು, ನಾಯಕರ ಹೆಸರನ್ನು ಬಹಿರಂಗಪಡಿಸಲು ಸಿದ್ಧವಿದ್ದರೂ ತನಿಖಾಧಿಕಾರಿಗಳು ಅದನ್ನು ದಾಖಲಿಸಿಕೊಳ್ಳುತ್ತಿಲ್ಲ. ಹೈಕೋರ್ಟ್ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ.

ವಿಧಾನಸೌಧದಲ್ಲಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ಕರ್ನಾಟಕ ಭ್ರಷ್ಟಾಚಾರದ ರಾಜಧಾನಿಯಾಗಿದೆ. ಈ ಕುರಿತು ಹೈಕೋರ್ಟ್ ನ್ಯಾಯಾಧೀಶರು ಏನು ಹೇಳಿದ್ದಾರೆ ಎಂದು ಎಲ್ಲರೂ ನೋಡಿದ್ದಾರೆ. ಪಿಎಸ್ಐ ಹಗರಣದಲ್ಲಿ ರಾಜ್ಯದ ಐಪಿಎಸ್ ಅಧಿಕಾರಿಗಳು, ರಾಜಕಾರಣಿಗಳು, ಮಂತ್ರಿಗಳು ಭಾಗಿಯಾಗಿದ್ದಾರೆ ಎಂದು ದೂರಿದರು.

ಪಿಎಸ್ಐ ನೇಮಕ ಅಕ್ರಮದಲ್ಲಿ ಭಾಗಿಯಾದ ಸಚಿವರು ನಾಯಕರ ಹೆಸರು ಮುಚ್ಚಿಡುವುದೇಕೆ?

ಸಿದ್ದರಾಮೋತ್ಸವ ಕಾರ್ಯಕ್ರಮ ವಿಚಾರವಾಗಿ ಕೇಳಿದ ಪ್ರಶ್ನೆಗೆ, ನಾಯಕರು ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುವುದರಲ್ಲಿ ಯಾವುದೇ ತಪ್ಪಿಲ್ಲ. ಅದು ಅವರ ವೈಯಕ್ತಿಕ ಹಾಗೂ ಅಭಿಮಾನಿಗಳ ಇಚ್ಛೆಗೆ ಬಿಟ್ಟದ್ದು. ಪಕ್ಷಕ್ಕೆ ಏನೆಲ್ಲ ಕಾರ್ಯಕ್ರಮಗಳು ಅನುಕೂಲವಾಗುತ್ತವೋ ಅದಕ್ಕೆ ಪಕ್ಷದ ಅಧ್ಯಕ್ಷನಾಗಿ ನಾನು ಬೆಂಬಲವಾಗಿ ನಿಲ್ಲುತ್ತೇನೆ ಎಂದರು.

75 ಕಿ.ಮೀ ಪಾದಯಾತ್ರೆ:ಆಗಸ್ಟ್ 15 ರಂದು ದೇಶದ 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ 75 ಸಾವಿರದಿಂದ 1 ಲಕ್ಷ ಕಾರ್ಯಕರ್ತರು ಬೆಂಗಳೂರಿನಲ್ಲಿ ಮೆರವಣಿಗೆ ಮಾಡಲಿದ್ದಾರೆ. ಇದರ ಜತೆಗೆ 75 ಕಿ.ಮೀ ಪಾದಯಾತ್ರೆ ಮಾಡಲಾಗುವುದು. ಇದನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಡೆಸಲು ಸೂಚಿಸಲಾಗಿದ್ದು, ಈ ವಿಚಾರವಾಗಿ ನಾಳೆ ಸಭೆ ಕರೆದಿದ್ದೇನೆ. ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು, ಸಂವಿಧಾನವನ್ನು ನೀಡಿದೆ. ಈ ಕಾರ್ಯಕ್ರಮದ ಆಚರಣೆ ನಮ್ಮ ಕರ್ತವ್ಯ ಎಂದರು.

ನ್ಯಾಯಾಂಗ ತನಿಖೆಗೆ ಒತ್ತಾಯ:ಹೈಕೋರ್ಟ್ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಬಗ್ಗೆ ರಾಹುಲ್ ಗಾಂಧಿ ಅವರ ಟ್ವೀಟ್ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಹುಲ್ ಗಾಂಧಿ ಅವರು ಸರಿಯಾಗಿ ಹೇಳಿದ್ದಾರೆ. ಈ ದೇಶದಲ್ಲಿ ನ್ಯಾಯಾಂಗದ ರಕ್ಷಣೆಯಾಗಬೇಕು. ನ್ಯಾಯಾಧೀಶರು ಭ್ರಷ್ಟಾಚಾರ ನಿಗ್ರಹದ ವಿಚಾರವಾಗಿ ಧ್ವನಿ ಎತ್ತಿ, ಮುಕ್ತವಾದ ತನಿಖೆ ಆಗಬೇಕು ಎಂದು ಹೇಳಿದ್ದಾರೆ. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ನ್ಯಾಯವನ್ನು ಎತ್ತಿ ಹಿಡಿಯಬೇಕಿದೆ ಎಂದು ಉತ್ತರಿಸಿದರು.

ಇದನ್ನೂ ಓದಿ:ಹಿಂದೆ ಭ್ರಷ್ಟಾಚಾರ ಮುಚ್ಚಿಹಾಕುವ ಸರ್ಕಾರ ಇತ್ತು: ಸಿಎಂ ಬಸವರಾಜ ಬೊಮ್ಮಾಯಿ

Last Updated : Jul 6, 2022, 9:49 PM IST

ABOUT THE AUTHOR

...view details