ಕರ್ನಾಟಕ

karnataka

ETV Bharat / city

Repeal of 3 farm laws:''ಅನ್ನದಾತ ಮತ್ತು ಕಾಂಗ್ರೆಸ್ ಹೋರಾಟಕ್ಕೆ ಸಿಕ್ಕ ಜಯ''- ಡಿಕೆಶಿ ವಿಶ್ಲೇಷಣೆ - ಕೃಷಿ ಕಾಯ್ದೆ ವಾಪಸ್​​ ವಿಚಾರವಾಗಿ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ

ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್(Repeal of 3 farm laws) ಪಡೆಯುತ್ತಿರುವುದು ಅನ್ನದಾತ ಮತ್ತು ಕಾಂಗ್ರೆಸ್​​ ಹೋರಾಟಕ್ಕೆ ಸಂದ ಜಯ ಎಂದು ಕಾಂಗ್ರೆಸ್​ ನಾಯಕ ಡಿ.ಕೆ ಶಿವಕುಮಾರ್(D.K Shivkumar) ಬಣ್ಣಿಸಿದ್ದಾರೆ.

D K Shivakumar
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

By

Published : Nov 19, 2021, 12:40 PM IST

ನವದೆಹಲಿ/ಬೆಂಗಳೂರು:ಮೂರು ಕರಾಳ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್(Repeal of 3 farm laws) ಪಡೆಯಬೇಕು ಎಂಬ ಅನ್ನದಾತರ ಹೋರಾಟಕ್ಕೆ(farmers protest) ಕೇಂದ್ರ ಸರ್ಕಾರ ಮಣಿದಿದೆ. ಇದು ದೇಶದ ಅನ್ನದಾತ ಮತ್ತು ಕಾಂಗ್ರೆಸ್​​ ಹೋರಾಟಕ್ಕೆ ಸಂದ ಚಾರಿತ್ರಿಕ ಜಯವಿದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್(D.K Shivkumar) ಹೇಳಿದ್ದಾರೆ.

ಪೊಲೀಸ್ ಬಲಕ್ಕೆ ಜಗ್ಗದ ರೈತರು

ಮಾಧ್ಯಮ ಹೇಳಿಕೆ ಮೂಲಕ, ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದ ಮೂರು ಕೃಷಿ ಕಾಯ್ದೆಗಳು ಎಪಿಎಂಸಿ ಮಾರುಕಟ್ಟೆಗೆ ಮಾರಕವಾಗಿದ್ದವು. ಬೆಂಬಲ ಬೆಲೆಗೆ ಕಾನೂನು ರಕ್ಷಣೆ ನೀಡಿರಲಿಲ್ಲ. ದೇಶದ ಕೃಷಿ ಕ್ಷೇತ್ರದಲ್ಲಿ ಖಾಸಗಿಯವರ ಪ್ರವೇಶ, ಒಪ್ಪಂದ ಸೇರಿದಂತೆ ಇತರ ಅಂಶಗಳು ರೈತರ ಭವಿಷ್ಯವನ್ನೇ ಸಮಾಧಿ ಮಾಡುತ್ತಿದ್ದವು.

ಈ ಹಿನ್ನೆಲೆಯಲ್ಲಿ ದೇಶದ ಅನ್ನದಾತರು ಚಳಿ, ಮಳೆ, ಬಿಸಿಲೆನ್ನದೇ ಬೀದಿಗಿಳಿದು ಸುದೀರ್ಘ ಹೋರಾಟ ನಡೆಸಿದರು. ಈ ಹೋರಾಟ ಹತ್ತಿಕ್ಕಲು ಸರ್ಕಾರ ಅಧಿಕಾರ, ಪೊಲೀಸ್ ಬಲ ಪ್ರಯೋಗಿಸಿತ್ತು. ಇದ್ಯಾವುದಕ್ಕೂ ಜಗ್ಗದ ರೈತರು ತಮ್ಮ ಭವಿಷ್ಯ ರಕ್ಷಣೆಗೆ ಬದ್ಧವಾಗಿ ನಿಂತರು ಎಂದಿದ್ದಾರೆ.

ಅನ್ನದಾತನ ಹೋರಾಟದ ಮುಂದೆ ಮಂಡಿಯೂರಿದ ಸರ್ಕಾರ

ಈ ಹೋರಾಟದಲ್ಲಿ ಹೆಚ್ಚು ರೈತರು ಪ್ರಾಣ ತ್ಯಾಗ ಮಾಡಿದ್ದು, ಕೇಂದ್ರ ಸರ್ಕಾರ ಇದೀಗ ಅನ್ನದಾತನ ಮುಂದೆ ಮಂಡಿಯೂರಿದೆ. ದೇಶದ ಅನ್ನದಾತರನ್ನು ಎದುರು ಹಾಕಿಕೊಂಡು ಉಳಿದವರಿಲ್ಲ. ಅಂದು ಬ್ರಿಟೀಷರು ರೈತರ ಮೇಲೆ ದಬ್ಬಾಳಿಕೆ ನಡೆಸಿ ದೇಶದಿಂದ ಕಾಲ್ಕಿತ್ತರು. ಇಂದು ಬಿಜೆಪಿ ಅದೇ ತಪ್ಪು ಮಾಡಿ ಬುದ್ಧಿ ಕಲಿತಿದೆ. ಹೋರಾಟದಲ್ಲಿ ಭಾಗವಹಿಸಿದ ಪ್ರತಿಯೊಬ್ಬ ರೈತನೂ ದೇಶದ ರಕ್ಷಣೆಯಲ್ಲಿ ಯೋಧನಂತೆ ಕೆಲಸ ಮಾಡಿದ್ದಾರೆ. ಇದು ಸರ್ವಾಧಿಕಾರಿ ಧೋರಣೆ ವಿರುದ್ಧ ಪ್ರಜಾಪ್ರಭುತ್ವಕ್ಕೆ ಸಿಕ್ಕ ಗೆಲುವು. ದುಷ್ಟ ಮನಸ್ಥಿತಿ ವಿರುದ್ಧ ಸಿಕ್ಕ ಗೆಲುವು ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:3 ಕೃಷಿ ತಿದ್ದುಪಡಿ ಕಾಯ್ದೆ ವಾಪಸ್: 'ಇದು ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ ಎಂದ ಹೆಚ್​ಡಿಕೆ'

ರೈತರ ಹಿತದೃಷ್ಟಿಯಿಂದ ಕಾಂಗ್ರೆಸ್ ಕೂಡ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿತ್ತು. ಕಾಂಗ್ರೆಸ್ ಪಕ್ಷ ಸಂಸತ್ತಿನ ಉಭಯ ಸದನಗಳು, ರಾಜ್ಯ ವಿಧಾನ ಮಂಡಲಗಳಲ್ಲಿ ಈ ಕರಾಳ ಕೃಷಿ ಕಾಯ್ದೆ ವಿರುದ್ಧ ಹೋರಾಟ ಮಾಡಿತ್ತು.

ಈ ಕರಾಳ ಕಾಯ್ದೆಯ ಹಿಂದೆ ಅಡಗಿರುವ ಕೇಂದ್ರ ಸರ್ಕಾರದ ಷಡ್ಯಂತ್ರವನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡಿದ್ದೆವು. ಕೇಂದ್ರ ಸರ್ಕಾರ ಇನ್ನು ಮುಂದಾದರು ತನ್ನ ಸರ್ವಾಧಿಕಾರಿ ಮನಃ ಸ್ಥಿತಿಯಿಂದ ಹೊರಬಂದು ಏಕಪಕ್ಷೀಯ ನಿರ್ಧಾರ ಕೈಗೊಳ್ಳುವುದನ್ನು ನಿಲ್ಲಿಸಬೇಕು. ದೇಶ ಹಾಗೂ ಅನ್ನದಾತನ ಹಿತದೃಷ್ಟಿಯಿಂದ ಎಲ್ಲರ ಜೊತೆ ಚರ್ಚೆ ಮಾಡಬೇಕು ಎಂದು ಈ ಸಮಯದಲ್ಲಿ ಸರ್ಕಾರಕ್ಕೆ ಆಗ್ರಹಿಸುತ್ತೇನೆ. ಕಾಂಗ್ರೆಸ್ ಎಂದೆಂದಿಗೂ ರೈತರು ಸೇರಿದಂತೆ ಎಲ್ಲ ವರ್ಗವರ ಜೊತೆಗೆ ಇರಲಿದೆ. ಅವರ ಹಿತಾಸಕ್ತಿಗೆ ಧಕ್ಕೆಯಾದರೆ ಹೋರಾಟ ಮಾಡಲಿದೆ ಎಂದು ಭರವಸೆ ನೀಡಿದರು.

ABOUT THE AUTHOR

...view details