ಕರ್ನಾಟಕ

karnataka

ETV Bharat / city

ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ

ಕೊರೊನಾ ಬಂದ ನಂತರ ದೇಶದ ಆರ್ಥಿಕ ಪರಿಸ್ಥಿತಿಯನ್ನು ಸರಿದೂಗಿಸಿ ಹತೋಟಿಗೆ ತರುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ.

By

Published : Apr 17, 2020, 7:20 PM IST

ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಡಿ.ಕೆ. ಸುರೇಶ್
ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಡಿ.ಕೆ. ಸುರೇಶ್

ಆನೇಕಲ್: ದೇಶದಲ್ಲಿ ಕೋವಿಡ್-19 ಬಂದ ನಂತರ ಆರ್ಥಿಕ ಪರಿಸ್ಥಿತಿಯನ್ನು ಸರಿದೂಗಿಸಿ ಹತೋಟಿಗೆ ತರುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಡಿ.ಕೆ.ಸುರೇಶ್

ಕೊರೊನಾ ಲಾಕ್​ಡೌನ್​ ಹಿನ್ನೆಲೆ ಸಂಕಷ್ಟದಲ್ಲಿರುವ ಜನರಿಗೆ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಗಣಿ, ಹುಲಿಮಂಗಲ, ಬಿಲ್ವಾರದಹಳ್ಳಿ ಸೇರಿದಂತೆ ಹಲವು ಕಡೆಗಳಲ್ಲಿ ಬಡ ಕೂಲಿ ಕಾರ್ಮಿಕರು ಹಾಗೂ ನಿರ್ಗತಿಕರಿಗೆ ಕಾಂಗ್ರೆಸ್ ಮುಖಂಡರು ದಿನ ಬಳಕೆ ಸಾಮಾಗ್ರಿಗಳ ಕಿಟ್ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಸರ್ಕಾರದ ಖಜಾನೆ ಖಾಲಿಯಾಗಿದ್ದು, ಜನರ ಬಳಿ ಹಣವಿಲ್ಲದೇ ಇರುವಂತಹ ಸಂದರ್ಭದಲ್ಲಿ ಬಿಡಿಎ ಸೈಟ್ ಮಾರಾಟಕ್ಕೆ ಸರ್ಕಾರ ಮುಂದಾಗಿದೆ. ಕಡಿಮೆ ಬೆಲೆಗೆ ಸೈಟ್​ಗಳನ್ನು ಮಾರಾಟ ಮಾಡಿದ್ರೆ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ನಷ್ಟವಾಗುತ್ತದೆ. ಈಗಿನ ಪರಿಸ್ಥಿತಿಯಲ್ಲಿ ಬಿಡಿಎ ಸೈಟ್​ಗಳನ್ನು ಮಾರಾಟ ಮಾಡುವುದಕ್ಕಿಂತ ಸರ್ಕಾರ ಅನ್ಯ ಮಾರ್ಗದಿಂದ ಖಜಾನೆ ತುಂಬಿಸಿಕೊಳ್ಳುವ ಕೆಲಸ ಮಾಡಬೇಕಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಬಿಜೆಪಿಯವರೇ ಅಧಿಕಾರಿದಲ್ಲಿರುವುದರಿಂದ ಬ್ಯಾಂಕ್​ಗಳ ಬಳಿ ಸಾಲ ಪಡೆದು ಆರ್ಥಿಕ ಪರಿಸ್ಥಿತಿ ಸರಿದೂಗಿಸಿಕೊಳ್ಳಬಹುದು. ಖಜಾನೆ ಖಾಲಿಯಾಗಿರುವುದರಿಂದ ಮುಂದಿನ ದಿನಗಳಲ್ಲಿ ಜನರು ಪರದಾಟ ನಡೆಸುವಂತಾಗಲಿದೆ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

For All Latest Updates

ABOUT THE AUTHOR

...view details