ಬೆಂಗಳೂರು:ಅಂಬೇಡ್ಕರ್ ಫೋಟೋ ತೆರವು ಮಾಡಿಸಿದ ಆರೋಪದ ಮೇಲೆ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಪಾಟೀಲ್ ಅವರ ವಜಾಗೆ ಆಗ್ರಹಿಸಿ ದಲಿತ ಸಂಘಟನೆಗಳು ಬೃಹತ್ ಮೆರವಣಿಗೆ ಹಮ್ಮಿಕೊಂಡಿವೆ. ಜೊತೆಗೆ ಇದೇ ವೇಳೆ ವಿಧಾನಸೌಧ, ಹೈಕೋರ್ಟ್ ಮುತ್ತಿಗೆಗೆ ಯತ್ನಿಸುವ ಸಾಧ್ಯತೆ ಇರುವ ಹಿನ್ನೆಲೆ ಪೊಲೀಸರು ಭಾರಿ ಭದ್ರತೆ ಕೈಗೊಂಡಿದ್ದಾರೆ.
ಮೈಸೂರಿನ ಜ್ಞಾನಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ಆರಂಭವಾಗಲಿರುವ ರ‍್ಯಾಲಿಯಲ್ಲಿ ನಟ ಚೇತನ್, ದಲಿತ ಮುಖಂಡರಾದ ಬಿ. ಗೋಪಾಲ್, ಹೆಣ್ಣೂರು ಶ್ರೀನಿವಾಸ್, ಮಾವಳ್ಳಿ ಶಂಕರ್. ಎಂ ವೆಂಕಟಸ್ವಾಮಿ, ಜಿಗಣಿ ಶಂಕರ್, ಕೇಶವಮೂರ್ತಿ ಭಾಗಿಯಾಗಲಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ವರೆಗೆ ಬೃಹತ್ ಮೆರವಣಿಗೆ ನಡೆಯುತ್ತಿದ್ದು, ಸಾವಿರಾರು ದಲಿತಪರ ಹೋರಾಟಗಾರರು ಭಾಗಿಯಾಗಿದ್ದಾರೆ.