ಕರ್ನಾಟಕ

karnataka

ETV Bharat / city

ಸಿಇಟಿ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ನಿರ್ಧಾರ : ಡಿಸಿಎಂ ಅಶ್ವತ್ಥ್​​​ ನಾರಾಯಣ್

ಈವರೆಗೆ ಪರೀಕ್ಷೆ ಗೊಂದಲ ಇದ್ದ ಕಾರಣ, ಸಿಇಟಿ ವಿಚಾರದಲ್ಲಿ ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ. ಆದರೆ, ಇಂದು ದ್ವಿತೀಯ ಪಿಯುಸಿ ಪರೀಕ್ಷೆ ನಡೆಸದಿರುವ ನಿರ್ಧಾರ ಹೊರಬಿದ್ದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ಕರೆದು ಚರ್ಚೆ ನಡೆಸಲಾಗುವುದು..

DCM Ashwathth Narayan
ಡಿಸಿಎಂ ಅಶ್ವತ್ಥ್​​​ನಾರಾಯಣ್

By

Published : Jun 4, 2021, 3:55 PM IST

ಬೆಂಗಳೂರು :ದ್ವಿತೀಯ ಪಿಯುಸಿಗೆ ಪರೀಕ್ಷೆ ನಡೆಸದೇ ಇರುವ ನಿರ್ಧಾರವನ್ನು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಇಂದು ಪ್ರಕಟಿಸಿದೆ. ಅಧಿಕಾರಿಗಳ ಸಭೆ ನಡೆಸಿ ನಂತರ ಸಿಇಟಿ ಪರೀಕ್ಷೆ ವಿಚಾರದಲ್ಲಿ ಸರ್ಕಾರದ ನಿಲುವನ್ನು ಪ್ರಕಟಿಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಡಾ.ಅಶ್ವತ್ಥ್​​​ ನಾರಾಯಣ್ ತಿಳಿಸಿದ್ದಾರೆ.

ಸಿಇಟಿ ಪರೀಕ್ಷೆ ನಡೆಸುವ ಬಗ್ಗೆ ನಿರ್ಧಾರ ಪ್ರಕಟಿಸ್ತೇವೆ.. ಡಿಸಿಎಂ ಅಶ್ವತ್ಥ್​​​ ನಾರಾಯಣ್

ಓದಿ: ಎಸ್ಎಸ್ಎಲ್​ಸಿ ಪರೀಕ್ಷೆ ಬಗ್ಗೆ ಸಿಎಂ ಯಡಿಯೂರಪ್ಪ ಮಹತ್ವದ ಹೇಳಿಕೆ

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್-19 ಆತಂಕದ ಕಾರಣದಿಂದ ದ್ವಿತೀಯ ಪಿಯುಸಿ ಮಕ್ಕಳಿಗೆ ಪರೀಕ್ಷೆ ನಡೆಸುವುದು ಬೇಡ. ಹಿಂದಿನ ವರ್ಷದ ಅಂಕಗಳ ಆಧಾರದಲ್ಲಿ ಪಾಸ್ ಮಾಡಿ, ಅಂಕ ನೀಡಲು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಮಂಡಳಿ ನಿರ್ಧಾರ ಕೈಗೊಂಡಿದೆ.

ಈವರೆಗೆ ಪರೀಕ್ಷೆ ಗೊಂದಲ ಇದ್ದ ಕಾರಣ, ಸಿಇಟಿ ವಿಚಾರದಲ್ಲಿ ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ. ಆದರೆ, ಇಂದು ದ್ವಿತೀಯ ಪಿಯುಸಿ ಪರೀಕ್ಷೆ ನಡೆಸದಿರುವ ನಿರ್ಧಾರ ಹೊರಬಿದ್ದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ಕರೆದು ಚರ್ಚೆ ನಡೆಸಲಾಗುವುದು. ಸರ್ಕಾರದ ಮಟ್ಟದಲ್ಲಿಯೂ ಚರ್ಚಿಸಿ ನಂತರ ಈ ಬಗ್ಗೆ ಸರ್ಕಾರ ತನ್ನ ಅಂತಿಮ ನಿರ್ಧಾರ ಪ್ರಕಟಿಸಲಿದೆ ಎಂದರು.

ABOUT THE AUTHOR

...view details