ಕರ್ನಾಟಕ

karnataka

ETV Bharat / city

ನಟ ಸಂಚಾರಿ ವಿಜಯ್‌ ಚಿಕಿತ್ಸಾ ವೆಚ್ಚ ಭರಿಸಲು ಮುಂದಾದ ಡಿಸಿಎಂ - ನಟ ಸಂಚಾರಿ ವಿಜಯ್‌

ನಟ ಸಂಚಾರಿ ವಿಜಯ್ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ತಾವೇ ಭರಿಸುವುದಾಗಿ ಉಪಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದ್ದಾರೆ.

Bangalore
ನಟ ಸಂಚಾರಿ ವಿಜಯ್‌ ಚಿಕಿತ್ಸಾ ವೆಚ್ಚ ಭರಿಸಲು ಮುಂದಾದ ಡಿಸಿಎಂ

By

Published : Jun 14, 2021, 11:52 AM IST

ಬೆಂಗಳೂರು: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಷ್ಟ್ರ ಪ್ರಶಸ್ತಿ ವಿಜೇತ ಕನ್ನಡ ನಟ ಸಂಚಾರಿ ವಿಜಯ್ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸಲು ಉಪಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಮುಂದೆ ಬಂದಿದ್ದಾರೆ.

ಇಂದು ಬೆಳಗ್ಗೆ ವಿಜಯ್‌ ಅವರು ಚಿಕಿತ್ಸೆ ಪಡೆಯುತ್ತಿರುವ ಅಪೋಲೋ ಆಸ್ಪತ್ರೆಯ ಆಡಳಿತ ವರ್ಗದ ಮುಖ್ಯಸ್ಥರಿಗೆ ಖುದ್ದಾಗಿ ಕರೆ ಮಾಡಿ ವಿಜಯ್‌ ಅವರ ಯೋಗಕ್ಷೇಮ ವಿಚಾರಿಸಿದ ಡಿಸಿಎಂ, ಅವರ ಚಿಕಿತ್ಸೆ ಆಗುವ ಸಂಪೂರ್ಣ ವೆಚ್ಚವನ್ನು ತಮ್ಮ ನೇತೃತ್ವದ ಡಾ.ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್‌ ಭರಿಸುತ್ತದೆ ಎಂದು ತಿಳಿಸಿದ್ದಾರೆ.

ವಿಜಯ್ ಅವರ ಚಿಕಿತ್ಸೆಗೆ ಸಂಬಂಧಿಸಿದಂತೆ ಅವರ ಸಂಬಂಧಿಗಳಿಂದಾಗಲೀ ಅಥವಾ ಬೇರೆ ಯಾರಿಂದಲೂ ಹಣ ಪಾವತಿಸಿಕೊಳ್ಳದಂತೆ ಆಸ್ಪತ್ರೆ ಆಡಳಿತ ವರ್ಗಕ್ಕೆ ಸೂಚಿಸಿದ್ದಾರೆ.

ಇದನ್ನೂ ಓದಿ:ಕೋಮಾ ಸ್ಥಿತಿಯಲ್ಲಿ ಸಂಚಾರಿ ವಿಜಯ್.. ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ಆಸ್ಪತ್ರೆ

ABOUT THE AUTHOR

...view details