ಕರ್ನಾಟಕ

karnataka

ETV Bharat / city

ಮಳೆಗಾಲಕ್ಕೂ ಮುನ್ನ ಕಾಮಗಾರಿಗಳ ತ್ವರಿತ ಅನುಷ್ಠಾನಕ್ಕೆ ಡಿಸಿಎಂ ಕಾರಜೋಳ ಸೂಚನೆ - Lokopayogi department meeting

ಪ್ರಸಕ್ತ ಸಾಲಿನಲ್ಲಿ ಒದಗಿಸಲಾದ ಅನುದಾನದಲ್ಲಿ ಶೇ. 50 ರಷ್ಟು ಮುಂದುವರೆದ ಕಾಮಗಾರಿಗಳಿಗೆ ಹಾಗೂ ಶೇ. 50 ರಷ್ಟು ಹೊಸ ಕಾಮಗಾರಿಗಳಿಗೆ ಮೀಸಲಿರಿಸಿ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಕಾರ್ಯಕ್ರಮಗಳನ್ನು ರೂಪಿಸಿ, ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಲು ಸಕಲ ಸಿದ್ಧತೆ ಕೈಗೊಳ್ಳಬೇಕು ಎಂದು ತಮ್ಮ ಇಲಾಖೆಯ ಅಧಿಕಾರಿಗಳಿಗೆ ಲೋಕೋಪಯೋಗಿ ಸಚಿವ ಗೋವಿಂದ್​ ಕಾರಜೋಳ ಸೂಚಿಸಿದರು.

ಸಭೆ
ಸಭೆ

By

Published : Apr 26, 2021, 8:39 PM IST

ಬೆಂಗಳೂರು : 2021- 22 ನೇ ಸಾಲಿನ ಬಜೆಟ್ ನಲ್ಲಿ ಅನುಮೋದಿಸಿದ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಅಗತ್ಯವಾಗಿರುವ ಎಲ್ಲಾ ಸಿದ್ಧತೆಗಳನ್ನು ಕೈಗೊಂಡು, ಗುಣಮಟ್ಟದ ಕಾಮಗಾರಿಗಳನ್ನು ಮಾಡುವ ಮೂಲಕ ಲೋಕೋಪಯೋಗಿ ಇಲಾಖೆ ನಂ. 1 ಸ್ಥಾನದಲ್ಲಿರುವಂತೆ ಎಲ್ಲಾ ಅಭಿಯಂತರರು ಶ್ರಮಿಸಬೇಕು ಎಂದು ಲೋಕೋಪಯೋಗಿ ಸಚಿವರೂ ಆಗಿರುವ ಡಿಸಿಎಂ ಗೋವಿಂದ ಎಂ‌.ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿಂದು ವರ್ಚುವಲ್ ಸಭೆಯ ಮೂಲಕ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಪ್ರಸಕ್ತ ಸಾಲಿನಲ್ಲಿ ಒದಗಿಸಲಾದ ಅನುದಾನದಲ್ಲಿ ಶೇ. 50 ರಷ್ಟು ಮುಂದುವರೆದ ಕಾಮಗಾರಿಗಳಿಗೆ ಹಾಗೂ ಶೇ. 50 ರಷ್ಟು ಹೊಸ ಕಾಮಗಾರಿಗಳಿಗೆ ಮೀಸಲಿರಿಸಿ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಕಾರ್ಯಕ್ರಮಗಳನ್ನು ರೂಪಿಸಬೇಕು. ತ್ವರಿತಗತಿಯಲ್ಲಿ ಕಾಮಗಾರಿ ಅನುಷ್ಠಾನೊಳಿಸಲು ಸಕಲ ಸಿದ್ಧತೆ ಕೈಗೊಳ್ಳಬೇಕು ಎಂದು ಹೇಳಿದರು.

ಕೋವಿಡ್ ನಿಯಂತ್ರಣಕ್ಕೆ ಪೂರಕವಾಗಿ ಕೈಗೊಳ್ಳುವ ಯಾವುದೇ ಕಟ್ಟಡ ನಿರ್ಮಾಣ, ಮೂಲಭೂತಸೌಕರ್ಯಗಳ ಅಭಿವೃದ್ಧಿಗೆ ಪೂರಕ ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆಯು ಆದ್ಯತೆಯ ಮೇರೆಗೆ ಕಾರ್ಯನಿರ್ವಹಿಸಬೇಕು. ಇಂತಹ ಕಟ್ಟಡಗಳನ್ನು ಕೂಡಲೇ ಹಸ್ತಾಂತರಿಸಬೇಕು. ಖಾಲಿ ಇರುವ ಕಟ್ಟಡಗಳನ್ನು ಜಿಲ್ಲಾಡಳಿತಕ್ಕೆ ನೀಡಿ ಸಹಕರಿಸಬೇಕು. ಇದಕ್ಕೆ ಪೂರಕವಾಗಿ ಯಾವುದೇ ಪ್ರಸ್ತಾವನೆಗಳು ಇದ್ದರೆ ಕೂಡಲೇ ಸರ್ಕಾರಕ್ಕೆ ಸಲ್ಲಿಸಿ ಮಂಜೂರಾತಿ ನೀಡಲಾಗುವುದು ಎಂದರು.

ಲೋಕೋಪಯೋಗಿ ಇಲಾಖೆಯು ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಕೋವಿಡ್ ನಿಯಮಾವಳಿಗಳು ಯಾವುದೇ ಅಡ್ಡಿಯಾಗುವುದಿಲ್ಲ. ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರ ನಮ್ಮ ಇಲಾಖೆಗೆ ಅನುಮತಿ ನೀಡಿದೆ ಎಂದು ಸಚಿವರು ತಿಳಿಸಿದರು.

ಈಗಾಗಲೇ ಅನುಷ್ಠಾನದಲ್ಲಿರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಕಾಮಗಾರಿಗಳ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ ಕೈಗೊಳ್ಳುವ ಫೇಸ್ 4 ರ 2ನೇ ಹಂತ ಕಾಮಗಾರಿಗಳಿಗೆ 3 ತಿಂಗಳೊಳಗೆ ಟೆಂಡರ್ ಕರೆದು ಕಾಮಗಾರಿಗಳನ್ನು ತ್ವರಿತವಾಗಿ ಪ್ರಾರಂಭಿಸಬೇಕು. ಕಳೆದ ಸೆಪ್ಟಂಬರ್ ನಲ್ಲಿ ಮೇಲ್ದರ್ಜೆಗೇರಿಸಿದ ರಸ್ತೆಗಳ ನಿರ್ವಹಣೆ ಕಾರ್ಯಕ್ರಮವನ್ನು ಸಿದ್ಧಪಡಿಸಿ ತ್ವರಿತವಾಗಿ ಅನುಷ್ಠಾನಗೊಳಿಸಬೇಕು. ರಸ್ತೆ ನಿರ್ವಹಣಾ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ಕೈಗೊಳ್ಳಬೇಕು. ಮುಂಗಾರು ಮಳೆ ಪ್ರಾರಂಭವಾಗುವುದಕ್ಕಿಂತ ಮುಂಚೆ ಗುಂಡಿ ಮುಚ್ಚುವ ಕಾಮಗಾರಿ ಹಾಗೂ ರಸ್ತೆ ಬದಿಯಲ್ಲಿರುವ ಗಿಡ ಗಂಟಿಗಳನ್ನು ತೆರವುಗೊಳಿಸಬೇಕು ಎಂದು ಸಚಿವರು ಸೂಚಿಸಿದರು.

ABOUT THE AUTHOR

...view details